ಬೀದರ್‌ | ವಲ್ಲಭಭಾಯ್ ಪಟೇಲ್ ರಾಷ್ಟ್ರದ ಏಕತೆಗೆ ಶ್ರಮಿಸಿದ ಧೀಮಂತ : ಸಿಪಿಐ ಅಲಿಸಾಬ್

Date:

ರಾಷ್ಟ್ರದ ಸ್ವಾತಂತ್ರ್ಯೋತ್ಸವದ ಜೊತೆಗೆ ಐಕ್ಯತೆ, ಅಖಂಡತೆ, ಸಮಗ್ರತೆಗಾಗಿ ಶ್ರಮಿಸಿದ ಧೀಮಂತ ಸರ್ದಾರ್ ವಲ್ಲಭಭಾಯ್ ಪಟೇಲ್‌ರು ಎಂದು ಸಿಪಿಐ ಅಲಿಸಾಬ್ ಹೇಳಿದರು.

- Advertisement -

ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿನಾಚರಣೆ’ ವಿಷಯದ ಪ್ರಬಂಧ ಸ್ಪರ್ಧೆ ಮತ್ತು ಬಹುಮಾನ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ʼಹರಿದು ಹಂಚಿ ಹೋದ ಇಡೀ ದೇಶದ ಏಕತೆಗಾಗಿ ಪಟೇಲ್ ಶ್ರಮಿಸಿದ್ದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರ ಜೀವನ ಮತ್ತು ಮೌಲ್ಯಗಳನ್ನು ಅರಿವ ಅಗತ್ಯವಿದೆ. ನಮ್ಮ ದೇಶ, ನಮ್ಮ ದೇಶದ ಸಂಸ್ಕೃತಿಕ ಏಕತೆಗಾಗಿ ದುಡಿಯುವ ಅಗತ್ಯವಿದೆ. ಅಪರಾಧ ರಹಿತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಈ ನಾಡಿನ ಭಾಷೆ. ಬಸವಾದಿ ಶರಣರು, ತತ್ವ ಪದಕಾರರು ಸೇರಿ ಹಲವರು ಕನ್ನಡ ಜಗತ್ತು ಕಟ್ಟಿದ್ದಾರೆʼ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಡಾ.ಮಲ್ಲಿಕಾರ್ಜುನ ಲಕಶೆಟ್ಟೆ ಮಾತನಾಡಿ, ʼಫ್ರೆಂಚ್, ಡಚ್, ಬ್ರಿಟಿಷ್ ಅಧಿಕಾರದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿದ ಭಾರತವನ್ನು ಒಗ್ಗೂಡಿಸುವ ಮೂಲಕ ದೇಶಕ್ಕೆ ಐಕ್ಯತೆ ತಂದು ಕೊಟ್ಟವರು ಸರ್ದಾರ್ ಪಟೇಲರು. ಅದಕ್ಕಾಗಿಯೇ ಅವರ ಜನ್ಮದಿನ ರಾಷ್ಟ್ರೀಯ ಏಕತಾ ದಿವಸವಾಗಿ ಆಚರಿಸಲಾಗುತ್ತದೆʼ ಎಂದರು.

WhatsApp Image 2025 10 30 at 3.03.49 PM

ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಮಾತನಾಡಿ, ʼಭಾಷಿಕ, ಪ್ರಾದೇಶಿಕ, ಸಾಂಸ್ಕೃತಿಕ ವೈವಿಧ್ಯ ಹೊಂದಿರುವ ಭಾರತ ತನ್ನ ಬಹುತ್ವ ಮತ್ತು ತಾತ್ವಿಕ ಬಹುಧಾರೆಗಳ ಮೂಲಕ ಬಹು ಸಾಂಸ್ಕೃತಿಕ ಪರೀಪರೆ ಉಳಿಸಿಕೊಂಡಿದೆ. ಪಟೇಲ್ ಅವರ ರಾಷ್ಟ್ರೀಯತೆ ಬಹುತ್ವದ ಐಕ್ಯತೆಯ ಪ್ರತಿಪಾದನೆಯಲ್ಲಿದೆʼ ಎಂದರು‌ .

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಿಪಿಐ ಅಲಿಸಾಬ್ ಅವರು ಪ್ರಥಮ 500 ರೂ., ದ್ವಿತೀಯ 200 ರೂ. ಮತ್ತು ಶ್ರೀ ಬಸವೇಶ್ವರ ಪದವಿ ಕಾಲೇಜು ವತಿಯಿಂದ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ನೀಡಲಾಯಿತು.

ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ರವೀಂದ್ರನಾಥ ಠಾಗೋರ್ ಅವರ ಭಾವಚಿತ್ರಗಳನ್ನು ಬಿಎಸ್ಸಿ ಮತ್ತು ಬಿಸಿಎ ವಿದ್ಯಾರ್ಥಿಗಳು ಕಾಲೇಜಿಗೆ ಕೊಡುಗೆಯಾಗಿ ನೀಡಿದರು.

ಇದನ್ನೂ ಓದಿ : ಬೀದರ್‌ | ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ : ವಿಜಯಪುರ ಎಸ್‌ಬಿಎಸ್ ಮಹಿಳಾ ಕಾಲೇಜು ಪ್ರಥಮ

ಕಾರ್ಯಕ್ರಮದಲ್ಲಿ ಬಿಡಿಪಿಸಿ ಅಧ್ಯಕ್ಷ ಬಸವರಾಜ ಕೋರಕೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿವೇಕಾನಂದ ಹೊದಲೂರೆ, ಶ್ರೀ ಬಸವೇಶ್ವರ ಪಿಜಿ ಕಾಲೇಜು ಪ್ರಾಚಾರ್ಯೆ ಡಾ.ಶಾಂತಲಾ ಪಾಟೀಲ, ಶ್ರೀ ಬಸವೇಶ್ವರ ಪಿಯು ಕಾಲೇಜು ಪ್ರಾಚಾರ್ಯ ಡಾ.ರುದ್ರಮಣಿ ಮಠಪತಿ, ಅಕ್ಕಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯೆ ಡಾ.ಮಾಯಾ ಮುರಾಳೆ ಡಾ. ಬಸವರಾಜ ಖಂಡಾಳೆ, ವಿವೇಕಾನಂದ ಶಿಂದೆ, ಅಶೋಕರೆಡ್ಡಿ, ಗುರುದೇವಿ ಕಿಚಡೆ, ಶೀತಲ್ ರೆಡ್ಡಿ, ನಾಗರಾಜ ನಾಸೆ, ಕೃಷ್ಣ ಗೌಳಿ ಮತ್ತಿತರರಿದ್ದರು. ಐಕ್ಯುಎಸಿ ಸಂಯೋಜಕ ಪವನ್ ಪಾಟೀಲ ಸ್ವಾಗತಿಸಿದರು. ಗಂಗಾಧರ ಸಾಲಿಮಠ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...