ಬೀದರ್‌ | ಲಂಚ ಕೇಳಿದ ಆರೋಪ : ಗ್ರಾಮ ಲೆಕ್ಕಿಗ ಅಮಾನತು

Date:

ರೈತರ ಬಳಿ ಹಣ ಕೇಳಿರುವ ಆಡಿಯೋ ಆರೋಪದಡಿ ಔರಾದ್‌ ತಾಲ್ಲೂಕಿನ ವಡಗಾಂವ(ದೇ) ಗ್ರಾಮದ ಗ್ರಾಮ ಲೆಕ್ಕಿಗ ನಾಮದೇವ ಮೇತ್ರೆ ಅವರನ್ನು ಅಮಾನತು ಮಾಡಲಾಗಿದೆ.

- Advertisement -

ರೈತರ ವಿವಿಧ ರೀತಿಯ ಕಡತಗಳನ್ನು ಮತ್ತು ಜನನ ಪ್ರಮಾಣ ಪತ್ರಗಳ ಪಂಚನಾಮ ವರದಿ ಸಲ್ಲಿಸಲು ವಿಳಂಬ ಮಾಡುತ್ತಿರುವ ಪತ್ರ ಹಾಗೂ ಲಂಚ ಕೇಳಿರುವ ಆಡಿಯೋ ವೈರಲ್‌ ಆದ ಹಿನ್ನೆಲೆ ಶಿಸ್ತು ಪ್ರಾಧಿಕಾರ ಹಾಗೂ ಬೀದರ್‌ ಸಹಾಯಕ ಆಯುಕ್ತ ಎಂ.ಡಿ.ಶಕೀಲ್‌ ಅಮಾನತು ಮಾಡಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸದರಿ ನೌಕರರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿತ್ತು. ಲಿಖಿತ ಸಮಜಾಯಿಸಿ ಉತ್ತರ ನೀಡಿದ ನೌಕರ ʼನನ್ನ ಕರ್ತವ್ಯದಲ್ಲಿ ಯಾವುದೇ ವಿಳಂಬ ಮಾಡಿರುವುದಿಲ್ಲ, ಯಾರ ಬಳಿಯೂ ಹಣ ಕೇಳಿಲ್ಲʼ ಎಂದು ಉತ್ತರಿಸಿದರು. ಗ್ರಾಮಸ್ಥರು ನೀಡಿದ ದೂರಿನ್ವಯ ಔರಾದ್‌ ತಹಸೀಲ್ದಾರ್‌ ಅವರು ಸದರಿ ನೌಕರ ವಿರುದ್ಧ ಸಿಸಿಎ ನಿಯಮಾವಳಿ ಪ್ರಕಾರ ಶಿಸ್ತು ಕ್ರಮಕೈಗೊಳ್ಳಲು ಸಲ್ಲಿಸಿದ ಪ್ರಸ್ತಾವನೆ ವರದಿ ಆಧರಿಸಿ ಅಮಾನತು ಮಾಡಲಾಗಿದೆ.

ಕರ್ನಾಟಕ ನಾಗರೀಕ ಸೇವಾ ನಿಯಮಗಳು 1958ರ ನಿಯಮ 98ರ ಅನುಸಾರ ಸದರಿ ಸಿಬ್ಬಂದಿಯವರು ಜೀವನ ಆಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಸದರಿ ಸಿಬ್ಬಂದಿಯವರು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.‌

ಇದನ್ನೂ ಓದಿ : ಬೀದರ್‌ | ಬೇಡಿಕೆ ಕಳೆದುಕೊಂಡ ಮಣ್ಣಿನ ಹಣತೆ : ಕುಂಬಾರರ ಬದುಕು ದೀಪದ ಕೆಳಗಿನ ಕತ್ತಲು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...