ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

Date:

ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬಂದೋಲೆ ಆದೇಶಿಸಿದ್ದಾರೆ.

- Advertisement -

‘2024-25 ನೇ ಸಾಲಿನ 15ನೇ ಹಣಕಾಸು ಯೋಜನೆಯನ್ನು ಸಾಮಾನ್ಯ ಸಭೆ/ಗ್ರಾಮ ಸಭೆ ಜರುಗಿಸದೆ ಗ್ರಾ.ಪಂ. ಸದಸ್ಯರಿಗೆ ಮಾಹಿತಿ ನೀಡದೆ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ನಡೆಸಿ ಅದರ ಬಿಲ್ ಪಾವತಿ ಮಾಡುತ್ತಿದ್ದಾರೆ. ನಿಧಿ-1 ನಿಧಿ-2 ಖಾತೆಗಳ ಕುರಿತು ಮಾಹಿತಿ ಕೇಳಿದರೂ ಮಾಹಿತಿ ನೀಡಿಲ್ಲ. 9(ಎ)11(ಬಿ) ಬಗ್ಗೆ ಮಾಹಿತಿ ಕೇಳಿದರು ಇಲ್ಲಿಯವರೆಗೆ ನೀಡಿರುವುದಿಲ್ಲ’ ಎಂದು ಅದೇ ಗ್ರಾಮ ಪಂಚಾಯಿತಿ ಸದಸ್ಯ ದೇವೆಂದ್ರ ಬಿ. ಪವಾರ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಗ್ರಾಮ ಪಂಚಾಯಿತಿ ನಿಧಿ-1 ಮತ್ತು ನಿಧಿ-2 ಖಾತೆಯಿಂದ ₹22 ಲಕ್ಷ ಮತ್ತು 15ನೇ ಹಣಕಾಸು ಯೋಜನೆಯಡಿ ₹37 ಲಕ್ಷ ಖರ್ಚು ಮಾಡಿದ್ದಾರೆ. 2024-25ನೇ ಸಾಲಿನ 15ನೇ ಹಣಕಾಸು ಯೋಜನೆ ಕಾಮಗಾರಿಗಳನ್ನು ಮತ್ತು ನಿಧಿ 1 & 2 ಖಾತೆಗಳಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ ಎಂದು ಸೆ. ರಂದು ಹುಲಸೂರ ಗ್ರಾ.ಪಂ. ಎದುರು ಧರಣಿ ನಡೆಸಿ ಜಿ.ಪಂ. ಸಿಇಒ ಅವರಿಗೆ ಮನವಿ ಸಲ್ಲಿಸಿ ಸೂಕ್ತ ತನಿಖೆ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.

ಸದರಿ ದೂರಿನ್ವಯ ಮಿರಖಲ್ ಗ್ರಾಮ ಪಂಚಾಯತ ಗ್ರೇಡ್-1 ಕಾರ್ಯದರ್ಶಿ ಹಾಗೂ ಹುಲಸೂರ ಗ್ರಾಮ ಪಂಚಾಯತ ಪ್ರಭಾರಿ ಪಿಡಿಒ ರಮೇಶ್ ಮಿಲಿಂದಕರ್ ಅವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಸರ್ಕಾರದ ಅನುದಾನವನ್ನು ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಬಗ್ಗೆ ಜಂಟಿ ಪರಿಶೀಲನಾ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಜಂಟಿ ಪರಿಶೀಲನಾ ವರದಿಯನ್ನು ಪರಿಗಣಿಸಿ ಪಿಡಿಒ ರಮೇಶ ಮಿಲಿಂದಕರ್ ಅವರ ಮೇಲಿನ ಆರೋಪಗಳಿಗೆ ಹಾಗೂ ದುರ್ನಡತೆಗೆ ಸಂಬಂಧಿಸಿದಂತೆ ಕರ್ನಾಟಕ ನಾಗರಿಕ ಸೇವಾ ನಿಯಮದಡಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಪಿಡಿಒ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ. ಕೆಸಿಎಸ್ಆರ್ ನಿಯಮ 98 ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...