ಬೀದರ್‌ | ಖಾಸಗಿ ಶಾಲೆ ಕಾಲೇಜುಗಳ ವಾಹನಗಳಲ್ಲಿ ನಿಯಮ ಉಲ್ಲಂಘನೆ; ಕಠಿಣ ಕ್ರಮಕ್ಕೆ ಸಾರಿಗೆ ಇಲಾಖೆ ಆದೇಶ

Date:

ಭಾಲ್ಕಿ, ಹುಮನಾಬಾದ ಮತ್ತು ಚಿಟಗುಪ್ಪಾ ತಾಲೂಕುಗಳ ವ್ಯಾಪ್ತಿಯ ಎಲ್ಲ ಖಾಸಗಿ ಶಾಲೆ ಕಾಲೇಜಿನ ವಾಹನಗಳಲ್ಲಿ ಅನುಮತಿಸಿದ ಆಸನ ವ್ಯವಸ್ಥೆಗಿಂತ ಹೆಚ್ಚಿನ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದು ಕಂಡು ಬಂದಲ್ಲಿ ಮೋಟಾರು ವಾಹನ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೀದರ್‌ ಜಿಲ್ಲೆ ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಆದೇಶಿಸಿದ್ದಾರೆ.

ಖಾಸಗಿ ಒಡೆತನದಲ್ಲಿ ನಡೆಸುತ್ತಿರುವ ಬಹುತೇಕ ಶಾಲಾ ಕಾಲೇಜು ವಾಹನಗಳು ಸುರಕ್ಷತಾ ನಿಯಮ ಪಾಲಿಸುತ್ತಿಲ್ಲ. ಇದರಿಂದ ಮಕ್ಕಳಿಗೆ ಅಸುರಕ್ಷತೆ ಕಾಡುತ್ತಿದೆ. ಕೂಡಲೇ ಸಾರಿಗೆ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ನಿಯಮ ಪಾಲಿಸದ ಶಾಲಾ-ಕಾಲೇಜು ವಾಹನಗಳ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಖಾಸಗಿ ಶಾಲೆ ಕಾಲೇಜುಗಳ ವಾಹನಗಳಲ್ಲಿ ನಿಯಮ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮಕ್ಕೆ ಸಾರಿಗೆ ಇಲಾಖೆ ಸೂಚನೆ

“ತಮ್ಮ ಶಾಲಾ ಕಾಲೇಜಿನ ಹೆಸರಿನಡಿಯಲ್ಲಿ ನೊಂದಣೆಯಾಗಿ ಚಾಲನೆಯಾಗುತ್ತಿರುವ ಶಾಲಾ ವಾಹನಗಳಲ್ಲಿ ನಿಗದಿತ ಆಸನಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ಪ್ರಯಾಣಿಸಲು ಅವಕಾಶ ನೀಡುತ್ತಿರುವದಾಗಿ ಮತ್ತು ಶಾಲಾ ವಾಹನ ಚಾಲಕರು ನಿಷ್ಕಾಳಜಿಯಿಂದ ವಾಹನ ಚಲಾಯಿಸುತ್ತಿರುವ ಕುರಿತು ಗ್ರಾಮಸ್ಥರಿಂದ ಆರೋಪ ವ್ಯಕ್ತವಾಗಿದೆ. ಹಾಗಾಗಿ ಈ ವಿಷಯವನ್ನು ಇಲಾಖೆಯು ತುಂಬಾ ಗಂಭೀರ ಪ್ರಕರಣವೆಂದು ಪರಿಗಣಿಸಿದೆ” ಎಂದು ಖಾಸಗಿ ಶಾಲೆ ಕಾಲೇಜು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯಯವರಿಗೆ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ತಮ್ಮ ಶಾಲಾ ಕಾಲೇಜಿನ ವಾಹನಗಳ ಚಾಲನೆಗೆ ಚಾಲನಾ ಅನುಜ್ಞಾಪತ್ರ ಹೊಂದಿರುವ ನುರಿತ ಅನುಭವಿ ಚಾಲಕರನ್ನು ನೇಮಿಸಿಕೊಂಡು ವಾಹನಕ್ಕೆ ಅನುಮತಿಸಿದ ಆಸನ ವ್ಯವಸ್ಥೆಗೆ ಇರುವಷ್ಟೇ ವಿದ್ಯಾರ್ಥಿಗಳನ್ನು ಕೂರಿಸಬೇಕು” ಎಂದು ಸೂಚನೆ ನೀಡಿದ್ದಾರೆ.

ಘಟನೆ ಹಿನ್ನೆಲೆ

“ಭಾಲ್ಕಿ ತಾಲೂಕಿನಾದ್ಯಂತ ಸಾವಿರಾರು ಮಕ್ಕಳು ಖಾಸಗಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪಾಲಕರು ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಲಕ್ಷಾಂತರ ರೂ. ಶುಲ್ಕ ಪಾವತಿಸುತ್ತಿದ್ದಾರೆ. ಆದರೆ, ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲಾ ವಾಹನಗಳಲ್ಲಿ ಸುರಕ್ಷತಾ ನಿಯಮ ಪಾಲನೆ ಮಾಡುತ್ತಿಲ್ಲ. ನಿಯಮಕ್ಕೂ ಮೀರಿ ಮಕ್ಕಳನ್ನು ಖಾಸಗಿ ಶಾಲಾ ವಾಹನದಲ್ಲಿ ಹೊತ್ತೊಯ್ಯಲಾಗುತ್ತಿದೆ. ಜತೆಗೆ ಅತಿವೇಗವಾಗಿ ವಾಹನ ಚಾಲನೆ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುವ ಆತಂಕ ಎದುರಾಗಿದೆ” ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

“ಕೆಲ ದಿನಗಳ ಹಿಂದೆ ಡೈಮಂಡ್ ಶಿಕ್ಷಣ ಸಂಸ್ಥೆಯ ಖಾಸಗಿ ವಾಹನ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಅದೃಷ್ಟವಶಾತ ಯಾವುದೇ ಜೀವಹಾನಿ ಸಂಭವಿಸಿಲ್ಲ. ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸುವ ಮೊದಲು ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ನಿಯಮ ಪಾಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ” ಎಂದು ಮನವಿಯಲ್ಲಿ ಎಚ್ಚರಿಸಿದ್ದರು.

ಕರವೇ ದೂರಿನ ಹಿನ್ನೆಲೆಯಲ್ಲಿ ಭಾಲ್ಕಿ ಭಾಗದ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದು, ಆದೇಶ ಹೊರಡಿಸಿದ್ದಾರೆ.

ಸಂಘಟನೆಯ ಪ್ರಮುಖರುಗಳಾದ ಗಿರೀಶ್ ಬಿರಾದಾರ್, ಬಸವರಾಜ ಕಾರಬಾರಿ, ಕಾಶಿನಾಥ ಚಳಕಾಪೂರೆ, ಅನಿಕೇತ ಶೇರಿಕಾರ್, ಚೇತನ್ ಬಿರಾದಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ...

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...