ಬೀದರ್‌ | ಸತ್ಯಾಗ್ರಹ ನಿರತ ಬೌದ್ದ ಬಿಕ್ಕುಗಳ ಮೇಲೆ ದೌರ್ಜನ್ಯ; ಬೌದ್ದ ಮಹಾಸಭಾ ಖಂಡನೆ

Date:

ಬಿಹಾರದಲ್ಲಿ ಮಹಾಬೋಧಿ ಮಹಾ ವಿಹಾರದ ಮುಕ್ತಿ ಆಂದೋಲನದ ಸತ್ಯಾಗ್ರಹ ನಿರತ ಬೌದ್ದ ಬಿಕ್ಕುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಔರಾದ್ ತಾಲ್ಲೂಕಿನ ಭಾರತೀಯ ಬೌದ್ಧ ಮಹಾಸಭಾ ಹಾಗೂ ಇತರೆ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಸಂಬಂಧ ಸೋಮವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್ ತಹಸೀಲ್ದಾರ್‌ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ʼಭಾರತೀಯ ಸಂವಿಧಾನದ ಪ್ರಕಾರ ಎಲ್ಲ ಧರ್ಮಗಳಿಗೆ ಸಮಾನ ಅವಕಾಶವಿದೆ. ಆದರೆ ಬಿಹಾರದಲ್ಲಿ ಬೌದ್ಧವಿಹಾರ ಸಮಿತಿಯಿಂದ ಭಂತೇಜಿ ಅವರನ್ನು ಹೊರಗಿಡುವ ಪ್ರಯತ್ನ ನಡೆದಿದೆ. ಈ ನೀತಿ ವಿರುದ್ಧ ಹೋರಾಡುತ್ತಿರುವ ಭಂತೇಜಿ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಬಂಧಿಸಿರುವುದು ಜಗತ್ತಿನ ಬುದ್ದ ಅನುಯಾಯಿಗಳಿಗೆ ತೀವ್ರ ನೋವುಂಟು ಮಾಡಿದೆʼ ಎಂದರು.

ʼರಾಷ್ಟ್ರಪತಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಭಂತೇಜಿಗಳ ಮೇಲಿನ ದೌರ್ಜನ್ಯ ತಡೆದು ತಪ್ಪಿತ್ತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲಿದಿದ್ದರೆ ಕರ್ನಾಟಕದಿಂದ ಬುದ್ದಗಯಾವರೆಗೆ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಸಂಚಾಲಕ ಸೋಪಾನರಾವ ಡೊಂಗರೆ ಸೇರಿದಂತೆ ಪ್ರಮುಖರಾದ ಶಿವಕುಮಾರ ಕಾಂಬಳೆ, ಪ್ರಕಾಶ ಬಂಗಾರೆ, ರತ್ನದೀಪ ಕಸ್ತೂರೆ, ಸುನೀಲ ಮಿತ್ರಾ, ದಿನೇಶ ಸಿಂಧೆ, ಆನಂದ ಕಾಂಬಳೆ, ರವಿ ಯರನಾಳೆ, ಉತ್ತಮ ಗಾಯಕವಾಡ, ಸಜೀತ್‌ ಸಿಂಧೆ, ಸುಂದರ ಮೇತ್ರೆ, ವಿನೋದ ಕಾಂಬಳೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...