ಬೀದರ್‌ | ದಲಿತರ ಮೇಲಿನ ದೌರ್ಜನ್ಯ ನಿರಂತರ : ಜನರ ಧ್ವನಿ ಸಂಘಟನೆ ಧರಣಿ

Date:

ಕಳೆದ ಒಂದು ವರ್ಷದಿಂದ ಭಾಲ್ಕಿ ತಾಲೂಕಿನ ಮಳಜಾಪುರ, ಚಳಕಾಪುರ ಮತ್ತಿತರೆಡೆ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ದಲಿತ ಮೇಲೆ ಸುಳ್ಳು ಪ್ರಕರಣಗಳು, ದಾಖಲಾಗಿದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜನರ ಧ್ವನಿ ಸಂಘಟನೆ ಬಸವಕಲ್ಯಾಣ ತಾಲ್ಲೂಕು ಘಟಕದಿಂದ ಧರಣಿ ನಡೆಸಲಾಯಿತು.

- Advertisement -

ಬಸವಕಲ್ಯಾಣ ನಗರದ ಮಿನಿ ವಿಧಾನಸೌಧ ಎದುರು ಸಂಘಟನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಧರಣಿ ನಡೆಸಿ ಪೊಲೀಸ್‌ ಮಹಾನಿರ್ದೇಶಕರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗ್ರಾಮದ ಲಿಂಗಾಯತ ಸಮಾಜದ ಮಹಿಳೆ ಬಹಿರಂಗವಾಗಿ ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿದ್ದಾರೆ. ಮಹಿಳೆ ವಿರುದ್ಧ ದಲಿತ ದೌರ್ಜನ್ಯಯಡಿ ಕೇಸ್ ದಾಖಲಾದರೂ ಬಂಧನವಾಗದೇ ಅದೇ ದಿನ ಆ ಮಹಿಳೆಗೆ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಭಾಲ್ಕಿ ತಾಲೂಕಿನ ರಾಚಪ್ಪಗೌಂಡಗಾಂವ ಗ್ರಾಮದ ದಲಿತ ವೃದ್ಧೆಯ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ್ದಾರೆ. ಮರೂರ್ ಗ್ರಾಮದ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಮೂರು ಎಕರೆ ಜಮೀನನ್ನು 13 ಜನ ಸವರ್ಣೀಯರು ಸ್ವಾಧೀನಪಡಿಸಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುತ್ತಿಲ್ಲ ಎಂದು ದೂರಿದರು.

ʼಕಳೆದ ಏಪ್ರಿಲ್‌ ತಿಂಗಳಲ್ಲಿ ಭಾಲ್ಕಿ ತಾಲ್ಲೂಕಿನ ಮಳಜಾಪುರ ಗ್ರಾಮಕ್ಕೆ ಆಗಮಿಸಿದ್ದ ಸಂವಿಧಾನ ಜಾಥಾ ಪ್ರವೇಶ ಸಮಯದಲ್ಲಿ ಜಾತಿವಾದಿಗಳ ಗುಂಪು ಜಾಥಾದ ಒಳಗೆ ನುಗ್ಗಿ ಹಲ್ಲೆ ನಡೆಸಿದ್ದರು. ಅದೇ ತಾಲ್ಲೂಕಿನ ಚಳಕಾಪೂರ ಗ್ರಾಮದ ಹನುಮಾನ ಜಾತ್ರಾ ಮೆರವಣಿಗೆಯಲ್ಲಿ ಉಂಟಾದ ಜಗಳದಲ್ಲಿ ಸವರ್ಣಿಯರು ದಲಿತರ ಓಣಿಗೆ ನುಗ್ಗಿ ಮನಬಂದಂತೆ ಮಹಿಳೆಯರ, ವೃದ್ಧರ ಮೇಲೆ ಹಲ್ಲೆ ನಡೆಸಿದ್ದಾರೆ. ಆದರೂ ಕೂಡಾ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿಲ್ಲ. ನವೆಂಬರ್ 4 ರಂದು ಖಟಕ ಚಿಂಚೋಳಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬಳಿಕ‌ ಪೊಲೀಸರು 76 ಜನರ ವಿರುದ್ಧ ಪ್ರಕರಣ ದಾಖಲಿಸಿ, ಮರುದಿನವೇ ಎಲ್ಲರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ಭಾಲ್ಕಿ ಡಿವೈಎಸ್ಪಿ ದೌರ್ಜನ್ಯಕ್ಕೊಳಕ್ಕಾದ 119 ದಲಿತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಜಾತಿವಾದಿ ಪ್ರದರ್ಶಿಸಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅವರನ್ನು ಕೂಡಲೇ ಅಮಾನತು ಮಾಡಬೇಕು. ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದ ಅಮಾಯಕ ದಲಿತರ ಮತ್ತು ಸವರ್ಣೀಯರ ಹೆಸರು ಪ್ರಕರಣದಿಂದ ಕೈಬಿಡಬೇಕು. ಮರೂರ್ ಗ್ರಾಮದ ಶಿವರಾಜ ಮೂಲಗೆ ಅವರ ಜಮೀನು ಸ್ವಾಧೀನ ಪಡಿಸಿಕೊಂಡಿದನ್ನು ಹಿಂದುರುಗಿಸಿ ದಬ್ಬಾಳಿಕೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಬೇಕು. ಹುಲಸೂರ ತಾಲೂಕಿನ ಮಿರಕಲ್‌ ತಾಂಡಾ ರೈತರು ಉಳುಮೆ ಮಾಡುವ ಜಮೀನಿನ ದಾಖಲೆ ಇದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ. ಇದನ್ನೂ ಕೂಡಲೇ ಹಿಂಪಡೆಯಬೇಕು.ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ ಭಾವಚಿತ್ರಕ್ಕೆ ಅವಮಾನ : ಪ್ರಕರಣ ದಾಖಲು; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಈ ವೇಳೆ ಜನರ ಧ್ವನಿ ಸಂಘಟನೆಯ ತಾಲೂಕು ಅಧ್ಯಕ್ಷ ಮಾರುತಿ ಡಿ.ಕಾಂಬಳೆ, ಸಂಘಟನೆಯ ಹಿರಿಯ ಮುಖಂಡ ತಿಪ್ಪಣ್ಣ ವಾಲಿ, ಜಿಲ್ಲಾಧ್ಯಕ್ಷ ರಾಜಕುಮಾರ ಸಿಂಧೆ, ತಾಲೂಕು ಉಪಾಧ್ಯಕ್ಷ ರತ್ನದೀಪ ಗಾಯಕವಾಡ, ಪ್ರಧಾನ ಕಾರ್ಯದರ್ಶಿ ಸೋಮನಾಥ ಮುಡಬೇಕರ, ಕಾರ್ಯದರ್ಶಿ ಅವಿನಾಶ ಫುಲಬನೆ,ಸುಭಂ ಕಾಂಬಳೆ, ಪಂಕಜ ಪಡಸಾಲೆ, ವಿಜಯ ಕಾಂಬಳೆ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...