ಬೀದರ್ | ತೋಗಲೂರ ಗ್ರಾಮದಲ್ಲಿ ನೀರಿನ ಸಮಸ್ಯೆ; ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಪರದಾಟ

Date:

ಹಲವು ತಿಂಗಳುಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಸ್ಥಳೀಯರು ಹನಿ ನೀರಿಗಾಗಿ ಪರದಾಡುತ್ತಿರುವ ಸ್ಥಿತಿ ಬೀದರ್‌ ಜಿಲ್ಲೆ ಹುಲಸೂರ ತಾಲೂಕಿನ ತೊಗಲೂರ ಗ್ರಾಮದಲ್ಲಿ ನಿರ್ಮಾಣವಾಗಿದೆ.

“ಗ್ರಾಮದ ಮುಖ್ಯರಸ್ತೆಯ ಮೇಲೆ ನೀರಿನ ವ್ಯವಸ್ಥೆಯಿದ್ದರೂ ಕೂಡ ಪ್ರಯೋಜನವಿಲ್ಲ. ರಸ್ತೆ ಬದಿಯಲ್ಲಿ ಹೊಸದಾಗಿ ನಿರ್ಮಿಸಿದ ಕಾರಣ ಎದೆಯೆತ್ತರದಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮಹಿಳೆಯರು ತೀರಾ ಸಂಕಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಮಹಿಳೆಯರು ಅವಲತ್ತುಕೊಂಡಿದ್ದಾರೆ.

ಹೊಸದಾಗಿ ಆಳೆತ್ತರದ ಚರಂಡಿ ನಿರ್ಮಿಸಿರುವಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಚರಂಡಿ ದಾಟಿ ನೀರು ತರುವ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಬಿದ್ದು ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ಜರುಗಿವೆ. ಆದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ವಿಪರ್ಯಾಸವೇ ಸರಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೀದರ್ | ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ; ಶಾಸಕ ಶೈಲೇಂದ್ರ ಬೆಲ್ದಾಳೆ ಎಚ್ಚರಿಕೆ

ಮುಖ್ಯ ರಸ್ತೆಯಿಂದ 20-30 ಅಡಿಯಲ್ಲಿ ನೀರಿನ ಹೊಸ ಟ್ಯಾಂಕ್ ನಿರ್ಮಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರಿನ ಸಮಸ್ಯೆ ಬಗೆಹರಿಸಲು ಕೂಡಲೇ ಮುಂದಾಗಬೇಕು” ಎಂದು ಸ್ಥಳೀಯ ಮಹಿಳೆಯರು ಒತ್ತಾಯಿಸಿದ್ದಾರೆ.

ಈ ವೇಳೆ ಗ್ರಾಮದ ಸರಸ್ವತಿ, ರಂಗಮ್ಮಾ, ಚಂದ್ರಕಲಾ, ಲಾಲಾಬಾಯಿ, ನಾಸಿಮ್ಮಾ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತರಗತಿವಾರು ಲಭ್ಯವಿರದ ಪಠ್ಯಪುಸ್ತಕ ಒದಗಿಸುವಂತೆ ದಸಂಸ ಆಗ್ರಹ

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ...

ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ದಯಾನಂದ

“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ...

ಗದಗ | ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಆಚರಣೆ

ಬಕ್ರೀದ್ ಹಬ್ಬದಲ್ಲಿ ಸಹೋದರತೆ, ಏಕತೆಯ ಸಂದೇಶವನ್ನು ಪಾಲಿಸುವ ಮೂಲಕ ಅಲ್ಲಾಹುವಿನ ಪ್ರೀತಿಗೆ...

ನಟ ದರ್ಶನ್ ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್ ನೋಟ್ ಪತ್ತೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 13...