ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು.
ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ ಹಿಡಿದು ನೀರಿನ ಸಮಸ್ಯೆ ಹೇಳಿಕೊಳ್ಳಲು ಪಂಚಾಯಿತಿಗೆ ತೆರಳಿದರು. ಸಮಸ್ಯೆಗೆ ಸ್ಪಂದನೆ ಸಿಗದ ಕಾರಣ ಸ್ಥಳದಲ್ಲೇ ಕೆಲ ಹೊತ್ತು ಧರಣಿ ಕುಳಿತು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ವೇಳೆ ನಿವಾಸಿಗಳು ಮಾತನಾಡಿ ಕಳೆದ ಒಂದು ವಾರದಿಂದ ನೀರು ಬರುತ್ತಿಲ್ಲ. ಇದರಿಂದ ಕುಡಿಯುವ ನೀರಿಗಾಗಿ ಪರದಾಟ ನಡೆಸಬೇಕಾಗಿದೆ. ಕೂಡಲೇ ನೀರಿನ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದರು.
ಬಳಿಕ ಗ್ರಾಮ ಪಂಚಾಯತ್ ಅಭಿವೃದ್ಧಿ ಸಂತೋಷ್ ಪಾಟೀಲ್ ಆಗಮಿಸಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಶೀಘ್ರದಲ್ಲೇ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.