ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆ ಅವರು ತಮ್ಮ 1.20 ಎಕರೆ ಜಮೀನು ಹಾಗೂ ಬೇರೆಯವರ 14 ಎಕರೆ ಭೂಮಿ ಲಾವಣಿಗೆ ಪಡೆದು ಬೇಸಾಯ ಮಾಡುತ್ತಿದ್ದರು. ಆದರೆ, ಕಳೆದ ವರ್ಷದಿಂದ ಉತ್ತಮ ಬೆಳೆ ಬಾರದೆ ನಷ್ಟ ಉಂಟಾಗಿತ್ತು. ಮೃತರು ಕೃಷಿಗಾಗಿ 10 ಲಕ್ಷ ಸಾಲ ಮಾಡಿಕೊಂಡಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ದೂರು ನೀಡಿದ್ದಾರೆ.
ಇದನ್ನೂ ಓದಿ : ಲಿಂಗಾಯತ ಮಠಾಧಿಪತಿಗಳ ಶಕ್ತಿ ಪ್ರದರ್ಶನ; ಸಿದ್ದರಾಮಯ್ಯಗೆ ಭರಪೂರ ಮೆಚ್ಚುಗೆ