ಮಹಿಳೆಯರ ಯಶಸ್ಸಿಗೆ ಪುರುಷರು ಬೆನ್ನೆಲುಬಾಗಬೇಕಿದೆ ಎಂದು ಕೃಷಿ ಅಧಿಕಾರಿ ಆರತಿ ಪಾಟೀಲ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಬೀದರ್ ನಗರದ ಕನ್ನಡ ಭವನದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮಹಿಳೆ ಈಗ ಅಬಲೆಯಲ್ಲ, ಸಬಲೆ. ಪ್ರತಿ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿದ್ದಾಳೆ. ಕೃಷಿ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ’ ಎಂದು ತಿಳಿಸಿದರು.
ಸಾಹಿತಿ ಜಗದೇವಿ ದುಬಲಗುಂಡೆ ಮಾತನಾಡಿ, ‘ಜಿಲ್ಲೆಯ ಅನೇಕ ಮಹಿಳೆಯರು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಮಹಿಳೆಯರು ಸಾಹಿತ್ಯ, ಕಲೆ, ಸಂಸ್ಕೃತಿ ಉಳಿವಿಗೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ‘ಬಸವಾದಿ ಶರಣರು 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರು’ ಎಂದರು.
’21ನೇ ಶತಮಾನದಲ್ಲಿ ಮಹಿಳೆಯರು ಸಮಾನತೆಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿಯಿದೆ. ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆಗೆ ಮುಕ್ತ ಅವಕಾಶ ಕೊಡಬೇಕು’ ಎಂದು ತಿಳಿಸಿದರು.
ಬಸವ ಕಾಯಕ, ದಾಸೋಹ ಫೌಂಡೇಷನ್ ಕಾರ್ಯದರ್ಶಿ ಸುವರ್ಣಾ ಧನ್ನೂರ,ಲಿಂಗಾರತಿ ಅಲ್ಲಮಪ್ರಭು ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು ಮಾಡಿದ
ವಿವಿಧ ಕ್ಷೇತ್ರಗಳ 16 ಸಾಧಕಿಯರಿಗೆ ಸ್ತ್ರೀ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಿಲ್ಪಾ ಮಜಗೆ ನಿರೂಪಿಸಿದರು. ಸ್ವರೂಪಾ ನಾಗೂರೆ ಸ್ವಾಗತಿಸಿದರು. ಜ್ಯೋತಿ ಭಾಲ್ಕೆ ವಂದಿಸಿದರು