ಬೀದರ್‌ | ಅರಿವಿಲ್ಲದ ಪುಢಾರಿಯಂತೆ ಮಾತನಾಡುವ ಯತ್ನಾಳ ಹೇಳಿಕೆ ಖಂಡನೀಯ : ಬಸವರಾಜ ಧನ್ನೂರ

Date:

ಪಹಣಿಯಲ್ಲಿ ವಕ್ಫ್ ನಮೂದು ವಿಚಾರಕ್ಕೆ ಸಂಬಂಧಿಸಿದಂತೆ ʼಬಸವಣ್ಣನಂತೆ ಹೊಳ್ಯಾಗ ಜಿಗಿಯಬೇಕು, ಇಲ್ಲವಾದರೆ ಸಾಬ್ರು ಆಗಿʼ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ತೀವ್ರವಾಗಿ ಖಂಡಿಸಿದ್ದಾರೆ.

- Advertisement -

ಬೀದರ್‌ನಲ್ಲಿ ಸೋಮುವಾರ ನಡೆದ ವಕ್ಫ್ ವಿರೋಧಿ ಪ್ರತಿಭಟನಾ ಸಭೆಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಶಾಸಕ ಯತ್ನಾಳ್ ನೀಡಿರುವ ಹೇಳಿಕೆ ಅವಿವೇಕತನದ್ದು. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಇತಿಹಾಸ ಅರಿತು ಮಾತನಾಡಬೇಕು. ಬಸವಣ್ಣನವರು ಮಾನವ ಕಲ್ಯಾಣಕ್ಕಾಗಿ ಕ್ರಾಂತಿ ಮಾಡಿದ್ದರು. ಅವರು ಹೊಳೆಯಲ್ಲಿ ಜಿಗಿದಿರಲಿಲ್ಲ. ಹಾಗೆ ಜಿಗಿದಿದ್ದರೆ ಯತ್ನಾಳ್ ಅವರ ತಂದೆ-ತಾಯಿ ಅವರಿಗೆ ಬಸವಣ್ಣನವರ ಹೆಸರು ಇಡುತ್ತಿರಲಿಲ್ಲ ಎಂದು ಧನ್ನೂರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಸವಣ್ಣ ಕ್ರಾಂತಿಯೋಗಿ, ಧೀರ ಪ್ರವಾದಿ. 12ನೇ ಶತಮಾನದಲ್ಲಿ ಶತ ಶತಮಾನಗಳ ಮೌಢ್ಯ, ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ, ಸಮಾನತೆ ಸಮಾಜ ನಿರ್ಮಿಸಿದ್ದರು. ಅವರು ಜನ್ಮವೆತ್ತ ಜಿಲ್ಲೆಯಲ್ಲೇ ಜನಿಸಿದ ಯತ್ನಾಳರು ಜೋಶ್‌ನಲ್ಲಿ
ಬಸವಣ್ಣನವರ ಕುರಿತು ತಪ್ಪು ಸಂದೇಶ ಹೋಗುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೌದ್ದರ ಧಾರ್ಮಿಕ ಹಕ್ಕಿಗಾಗಿ ಬೃಹತ್ ಪ್ರತಿಭಟನೆ

ʼಒಂದನ್ನಾಡಲು ಹೋಗಿ ಒಂಬತ್ತನ್ನಾಡುವ ಡಂಬಕರ ಮೆಚ್ಚ ನಮ್ಮ ಕೂಡಲಸಂಗಮದೇವʼ ಎಂದು ಬಸವಣ್ಣ ಹೇಳಿದ್ದಾರೆ. ಬಸವ ಧರ್ಮದವರೇ ಆದ ಯತ್ನಾಳ್ ಅವರಿಗೆ ನಾಲಿಗೆ ಹಿಡಿತ ತಪ್ಪಿದ, ಅರಿವಿಲ್ಲದ ಪುಢಾರಿಯಂತೆ ಮಾತನಾಡುವುದು ಶೋಭೆ
ತರುವುದಿಲ್ಲ ಎಂದಿದ್ದಾರೆ. ಬಸವಣ್ಣನವರ ಬಗ್ಗೆ ಲಘುವಾಗಿ ಮಾತನಾಡಿ, ಬಸವ ಭಕ್ತರಿಗೆ ನೋವು ಉಂಟು ಮಾಡಿದ್ದಕ್ಕೆ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...