ಬೀದರ್‌ | 84.82 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಶೀಘ್ರ ಚಾಲನೆ: ಶಾಸಕ ಪ್ರಭು ಚವ್ಹಾಣ 

Date:

  • ಔರಾದ (ಬಿ) ಕ್ಷೇತ್ರದಲ್ಲಿ ಪ್ರತಿ ವರ್ಷ ಎದುರಾಗುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಯೋಜನೆ
  • ಸಚಿವನಾಗಿದ್ದಾಗ ಕ್ಷೇತ್ರಕ್ಕೆ ನೀರು ಪೂರೈಸುವ 84.82 ಕೋಟಿಯ ಯೋಜನೆಗೆ ಅನುಮೋದನೆ

ಅಮೃತ ಯೋಜನೆಯಡಿ  ಔರಾದ(ಬಿ) ಪಟ್ಟಣ, ಕಮಲನಗರ ಹಾಗೂ 6 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸುವ 84.82 ಕೋಟಿಯ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದೆಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಔರಾದ (ಬಿ) ಕ್ಷೇತ್ರದಲ್ಲಿ ಪ್ರತಿ ವರ್ಷ ಎದುರಾಗುವ ನೀರಿನ ಸಮಸ್ಯೆಗೆ ಶಾಶ್ವತವಾಗಿ ಕೊನೆಗಾಣಿಸಬೇಕೆಂಬ ಉದ್ದೇಶದಿಂದ ಶಾಸಕನಾಗಿ ಆಯ್ಕೆಯಾದಾಗಿನಿಂದ ನಿರಂತರ ಕೆಲಸ ಮಾಡುತ್ತಿದ್ದೇನೆ. ಈಗಾಗಲೇ ಕ್ಷೇತ್ರದಲ್ಲಿ 200 ಕೋಟಿಗೂ ಹೆಚ್ಚು ಮೊತ್ತದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಲವು ಕಡೆಗಳಲ್ಲಿ ಕೆಲಸ ಪೂರ್ಣಗೊಂಡಿದ್ದು, ಇನ್ನೂ ಕೆಲವೆಡೆ ಪ್ರಗತಿಯಲ್ಲಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಹಿಂದೆ ಸಚಿವನಾಗಿದ್ದಾಗ ಮುಖ್ಯಮಂತ್ರಿಗಳು ಮತ್ತು ಸಂಬಂಧಿಸಿದ ಸಚಿವರ ಮೇಲೆ ಒತ್ತಡ ತಂದು ಕ್ಷೇತ್ರಕ್ಕೆ ನೀರು ಪೂರೈಸುವ 84.82 ಕೋಟಿಯ ಯೋಜನೆಗೆ ಅನುಮೋದನೆ ಪಡೆದುಕೊಂಡಿದ್ದೆ. ಚುನಾವಣೆ ಕಾರಣದಿಂದ ಕೆಲಸ ವಿಳಂಬವಾಗಿತ್ತು. ಇದೀಗ ಟೆಂಡರ್ ಹಂತದಲ್ಲಿದ್ದು ಶೀಘ್ರವೇ ಕಾಮಗಾರಿಗೆ ಚಾಲನೆ ಸಿಗಲಿದೆ” ಎಂದು ತಿಳಿಸಿದ್ದಾರೆ.

“ಈ ಯೋಜನೆಯಡಿ ಔರಾದ(ಬಿ) ಪಟ್ಟಣ, ಕಮಲನಗರ ಹಾಗೂ 6 ಗ್ರಾಮಗಳಿಗೆ ಕಾರಂಜಾ ಜಲಾಶಯದಿಂದ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವುದರಿಂದ ಯೋಜನೆ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ವರ್ಷಪೂರ್ತಿ ಕುಡಿಯುವ ನೀರು ಲಭ್ಯವಾಗಲಿದೆ. ಜನತೆಯ ಹಲವು ವರ್ಷಗಳ ಬೇಡಿಕೆ ಈಡೇರುವ ಕಾಲ ಇದೀಗ ಸನ್ನಿಹಿತವಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲದಲ್ಲೂ ಸರ್ಕಾರ ಸಚಿವರಿಗಾಗಿ ಐಷಾರಾಮಿ ಕಾರು ಕೊಳ್ಳುವ ಅಗತ್ಯವಿತ್ತೇ?

“ಔರಾದ(ಬಿ) ವಿಧಾನಸಭಾ ಕ್ಷೇತ್ರದ ಅನೇಕ ಹಳ್ಳಿಗಳು ನೀರಿಗಾಗಿ ಮಾಂಜ್ರಾ ನದಿಯನ್ನು ಅವಲಂಬಿಸಿದ್ದವು. ಬೇಸಿಗೆ ಕಾಲದ ಸಂದರ್ಭದಲ್ಲಿ ಈ ನದಿಯಲ್ಲಿನ ನೀರು ಬತ್ತಿ ಹೋಗುವುದರಿಂದ ನದಿ ನೀರನ್ನು ಅವಲಂಬಿಸಿದ ಹಳ್ಳಿಗಳಲ್ಲಿ ನೀರಿನ ಬವಣೆ ಉಂಟಾಗುವುದು ಸಾಮಾನ್ಯವಾಗಿತ್ತು, ನೂತನ ಯೋಜನೆಯಿಂದಾಗಿ ಔರಾದ(ಬಿ) ಪಟ್ಟಣ, ಕಮಲನಗರ ಹಾಗೂ 6 ಹಳ್ಳಿಗಳಿಗೆ ನಿರಂತರ ಕುಡಿಯುವ ನೀರು ಪೂರೈಸಲು ಸಹಕಾರಿಯಾಗಲಿದೆ” ಎಂದು ಶಾಸಕರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...

ಬೀದರ್‌ | ʼಆಪ್‌ʼ ರಾಜ್ಯ ಅಲ್ಪಸಂಖ್ಯಾತರ ಘಟಕಕ್ಕೆ ಸೈಯದ್‌ ಜಮೀಲ್‌ ನೇಮಕ : ಸನ್ಮಾನ

ಆಮ್ ಆದ್ಮಿ ಪಕ್ಷದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಬೀದರ್‌ನ ಸೈಯದ್‌...

ಬೀದರ್‌ | ಅಂತರಂಗ ಶುದ್ಧಿಯಿಂದ ಬದುಕಿಗೆ ನೆಮ್ಮದಿ

ಚಟ್ನಾಳ ಗ್ರಾಮದಲ್ಲಿ ವಿಶೇಷ ಶಕ್ತಿಯಿದ್ದು, ಅಂತರಂಗ ಶುದ್ಧಿಯಿಂದ ಸೇವೆಗೈಯುವ ಪರಂಪರೆ ಇಲ್ಲಿದೆ....

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...