ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

Date:

ನೀಟ್-ಯುಜಿ-2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ ತರಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

- Advertisement -

ಈ ಸಂಬಂಧ ಭಾಲ್ಕಿ ತಹಸೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ʼದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ಪಾರದರ್ಶಕತೆ, ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆʼ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಜಿಲ್ಲಾ ಸಂಚಾಲಕ ನಾಗರಾಜ ಸುಲ್ತಾನಪುರೆ ಮಾತನಾಡಿ, ʼನೀಟ್-ಯುಜಿ-2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ವರ್ಷಗಳ ಕಾಲ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಇಂತಹ ಅಕ್ರಮಗಳು ದೊಡ್ಡ ಅನ್ಯಾಯವಾಗಿದ್ದು, ಪ್ರಕರಣದ ಕುರಿತು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಸಮಗ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕುʼ ಎಂದು ಒತ್ತಾಯಿಸಿದರು.

ʼಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ಕಠಿಣ ಕಾನೂನು ಜಾರಿಗೆ ತರಬೇಕು, ನೀಟ್ ಅಕ್ರಮದಲ್ಲಿ ಭಾಗಿಯಾದವರಿಗೆ ಜೀವಾವಧಿ ಶಿಕ್ಷೆ ಅಥವಾ ದೀರ್ಘಾವಧಿಯ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನು ವ್ಯವಸ್ಥೆ ರೂಪಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆಯನ್ನು ರಾಷ್ಟ್ರದ ಭವಿಷ್ಯದ ವಿರುದ್ಧದ ಅಪರಾಧ ಎಂದು ಘೋಷಿಸಿ, ಒಬ್ಬ ವಿದ್ಯಾರ್ಥಿಯ ಕನಸು ಹಾಳು ಮಾಡಿದರೆ ದೇಶದ ಭವಿಷ್ಯ ಹಾಳು ಮಾಡಿದಂತೆಯೇ ಎಂಬ ತತ್ವದಡಿ ಸರ್ಕಾರ ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಬಳಕೆ : ಭೀಮಣ್ಣ ಮೇಟಿ

ʼನಿಗದಿತ ಅವಧಿಯೊಳಗೆ ತನಿಖೆ ಪೂರ್ಣಗೊಳಿಸಿ, ಪರೀಕ್ಷಾ ಮಾಫಿಯಾ ಸೇರಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತನಿಖೆ ಪೂರ್ಣಗೊಳ್ಳುವವರೆಗೆ ಸಂಪೂರ್ಣ ಪಾರದರ್ಶಕತೆ ಕಾಪಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಪ್ರಶ್ನೆಪತ್ರಿಕೆಯ ಗೌಪ್ಯತೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಇನ್ನಷ್ಟು ಬಲಪಡಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿಗಳು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | ಹತ್ಯೆಯಾಗಿ ಆರು ತಿಂಗಳ ಬಳಿಕ ಆರು ನಾಗಾ ಯುವಕರ ಅಂತ್ಯಕ್ರಿಯೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೇಯ್ ಗ್ರಾಮದಿಂದ ಕಳೆದ ಮೇ 13...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ : ಔರಾದ್‌ ಬಂದ್‌ ಹಿಂಪಡೆಯಲು ಸಚಿವ ಈಶ್ವರ ಖಂಡ್ರೆ ಮನವಿ

ಔರಾದ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಲವು ತುರ್ತು ಕ್ರಮಗಳನ್ನು...

ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್...