ಬೀದರ್‌ | ದಲಿತ ವಿದ್ಯಾರ್ಥಿಗೆ ʼಜೈ ಶ್ರೀರಾಮ್‌ʼ ಹೇಳುವಂತೆ ಒತ್ತಾಯ; ಹಲ್ಲೆ ಆರೋಪ

Date:

ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು ಬಲವಂತವಾಗಿ ಹನುಮಾನ್ ದೇವಾಸ್ಥಾನಕ್ಕೆ ಕರೆದೊಯ್ದು, ಒತ್ತಾಯವಾಗಿ ʼಜೈ ಶ್ರೀರಾಮ್‌ʼ ಎಂದು ಹೇಳಿಸಿ, ಹಲ್ಲೆ ಮಾಡಿರುವ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹುಮನಾಬಾದ್‌ ತಾಲೂಕಿನ ಹಣಸಗೇರಾ ಗ್ರಾಮದ ದ್ವಿತೀಯ ಪಿಯು ಓದುತ್ತಿರುವ ವಿದ್ಯಾರ್ಥಿ ದರ್ಶನ ಲಕ್ಷ್ಮಣ ಕಟ್ಟಿಮನಿ ಎಂಬುವವರು ನೀಡಿದ ದೂರಿನ ಅನ್ವಯ ಹುಮನಾಬಾದ್ ಪಟ್ಟಣದ ಅಭಿಷೇಕ ವಾಂಜರಿ, ರಿತೇಶ ರೆಡ್ಡಿ, ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ದರ್ಶನ ಫೆ.22 ರಂದು “ನೀನೇ ದೇವಾ ನೀನೇ ಎಲ್ಲಾ, ಇವನಲ್ಲಾ ಗುರು, ಅವನು ನಾವೆಲ್ಲ ಅವರ ಅಭಿಮಾನಿಗಳು ಎನ್ನುವ ʼಹನುಮಾನ, ರಾಮ ಹಾಗೂ ಡಾ.ಬಿ.ಆರ್.‌ಅಂಬೇಡ್ಕರ್‌” ಪೊಟೋ ಇರುವ ವಿಡಿಯೋ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ನೋಡಿದ ನಾಲ್ವರು ದರ್ಶನಗೆ ಆಟೋದಲ್ಲಿ ಹನುಮಾನ್ ದೇವಾಸ್ಥಾನಕ್ಕೆ ಕರದೊಯ್ದು‌, ಜೈ ಶ್ರೀರಾಮ್ ಎಂದು ಹೇಳಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ದೂರು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು ಜಾತಿ ನಿಂದನೆ ಮಾಡಿದ್ದು ಅಲ್ಲದೆ ಜೈ ಶ್ರೀರಾಮ್‌ ಹೇಳುವಂತೆ ಒತ್ತಾಯಿಸಿದ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ” ವಿದ್ಯಾರ್ಥಿ ದರ್ಶನ ದೂರಿನಲ್ಲಿ ದಾಖಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹುಮನಾಬಾದ್‌ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ ಸರ್ಕಾರ ಉಳಿಸುವ ಜವಾಬ್ದಾರಿ ಡಿಕೆಶಿ ಹೆಗಲಿಗೆ

ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ...

‌ಪಾಕಿಸ್ತಾನ ಜಿಂದಾಬಾದ್‌ | ಮಾಧ್ಯಮಗಳ ವಿಡಿಯೋ ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ: ಡಾ. ಜಿ.ಪರಮೇಶ್ವರ್

‌ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ...

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್...