ಭಾಲ್ಕಿ ಹಿರೇಮಠದಲ್ಲಿ ವ್ಯಸನ ಮುಕ್ತ ದಿನಾಚರಣೆ

Date:

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನದ ನಿಮಿತ್ತ ಶನಿವಾರ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.

- Advertisement -

ಇಳಕಲ್‌ನ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ ಪಟ್ಟದ್ದೇವರು ಪುಷ್ಪನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಅನುಭಾವ ನೀಡಿದ ಶಿವಬಸವ ಸ್ವಾಮೀಜಿ ಅವರು, “ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರು ಜೀವನದುದ್ದಕ್ಕೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು” ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ಸುಂದರ ಮತ್ತು ಸದೃಢ ಸಮಾಜ ನಿರ್ಮಾಣದಲ್ಲಿ ಮಠ ಮಾನ್ಯಗಳ ಕೊಡುಗೆ ದೊಡ್ಡದಿದೆ. ಧಾರ್ಮಿಕ, ಕೃಷಿ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮಠಗಳು ವಿಶಿಷ್ಟ ಸೇವೆ ಸಲ್ಲಿಸುತ್ತಿವೆ. ಅದರಲ್ಲಿ ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಜನಪರ ಮತ್ತು ಜೀವಪರ ಸೇವೆ ಮಾದರಿಯಾಗಿದೆ” ಎಂದರು.

“ಲಿಂಗೈಕ್ಯ ಮಹಾಂತ ಶಿವಯೋಗಿಗಳು ಅಪ್ಪಟ ಬಸವತತ್ವ ಅನುಯಾಯಿ ಆಗಿದ್ದರು. ಜೀವನದುದ್ದಕ್ಕೂ ನಡೆ-ನುಡಿಯಲ್ಲಿ ಬಸವಾದಿ ಶರಣರ ವಿಚಾರಧಾರೆ ಮೈಗೂಡಿಸಿಕೊಂಡು ಬಸವತತ್ವದ ದಂಡನಾಯಕರೆಂದೇ ಗುರುತಿಸಿಕೊಂಡಿದ್ದರು. ಜತೆಗೆ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜೋಳಿಗೆ ಹಿಡಿದ ಅಪರೂಪದ ಶಿವಯೋಗಿಗಳು ಆಗಿದ್ದರು” ಎಂದು ಸ್ಮರಿಸಿದರು.

WhatsApp Image 2026 08 01 at 6.27.15 PM

“ರಾಜ್ಯ, ದೇಶ ಸೇರಿ ವಿದೇಶಗಳಲ್ಲೂ ಕೂಡ ಸಂಚರಿಸಿ ಪರಮ ಪೂಜ್ಯರು ಜೋಳಿಗೆ ಹಿಡಿದು ಜನರ ಬಳಿಯಲ್ಲಿ ದುಶ್ಚಟ, ದುರ್ಗುಣಗಳನ್ನು ಬೀಕ್ಷೆ ಬೇಡಿ ಜನರಲ್ಲಿನ ವ್ಯಸನಗಳನ್ನು ಬೀಡಿಸುವ ಕೆಲಸ ಮಾಡಿದ್ದರು. ಅಂತಹ ಅಪರೂಪದ ಸೇವೆಯನ್ನು ಗುರುತಿಸಿ ಪರಮ ಪೂಜ್ಯ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಆ.1ರಂದು ರಾಜ್ಯ ಸರಕಾರ ವ್ಯಸನ ಮುಕ್ತ ದಿನಾಚರಣೆಯನ್ನಾಗಿ ರಾಜ್ಯದಾದ್ಯಂತ ಆಚರಿಸುತ್ತಿರುವುದು ಅಭಿಮಾನದ ಸಂಗತಿ. ಇಂದಿನ ಯುವ ಪೀಳಿಗೆ ಪರಮ ಪೂಜ್ಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಆದರ್ಶ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು” ಎಂದು ತಿಳಿಸಿದರು.

ಇದನ್ನೂ ಓದಿ : ಸಾಹಿತ್ಯರತ್ನ ಅಣ್ಣಾಭಾವು ಸಾಠೆ : ಶೋಷಿತರ ಬದುಕಿಗೆ ಧ್ವನಿಯಾದ ಜನಪದ ಸಾಹಿತಿ

ಕಾರ್ಯಕ್ರಮದಲ್ಲಿ ಶಂಕರಲಿಂಗ ಸ್ವಾಮೀಜಿ, ಸಿದ್ಧಬಸವ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಶಶಿಧರ ಕೋಸಂಬೆ, ಸಾಹಿತಿ ರಾಜು ಜುಬರೆ, ದೀಪಕ ಠಮಕೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಮುಖ್ಯಗುರು ಬಾಬು ಬೆಲ್ದಾಳ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ...

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...