ಬೀದರ್ | ಕೆಡಿಪಿ ಸಭೆಯಲ್ಲಿ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಶಾಸಕರು : ಸಮಾಜಕ್ಕೆ ಇದು ಮಾದರಿಯೇ?

Date:

ಬೀದರ್ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರು ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿರುವ ಘಟನೆ ನಡೆದಿದೆ.

- Advertisement -

ಹುಮನಾಬಾದ್ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಅವರು ಅರಣ್ಯ ಇಲಾಖೆಗೆ ಸಂಬಂಧಿಸಿ ಲೇಔಟ್‌ ಒತ್ತುವರಿ ಸಂಬಂಧ ಚರ್ಚೆ ನಡೆಸಿದರು. ಬಳಿಕ ಎಂಎಲ್ಸಿ ಭೀಮರಾವ್ ಪಾಟೀಲ್ ಅದೇ ವಿಷಯ ಮಾತನಾಡುತ್ತ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಿದ್ದಲಿಂಗಪ್ಪ ಪಾಟೀಲ್ ಮಾತನಾಡಿದ್ದು ವಿರೋಧಿಸಿ ತಮ್ಮ ಆಸನದಿಂದ ಎದ್ದ ಭೀಮರಾವ್ ಪಾಟೀಲ್ ಅವರು ಸಿದ್ದಲಿಂಗಪ್ಪ ಪಾಟೀಲ್ ಕಡೆಗೆ ತೆರಳಿದರು. ಈ ವೇಳೆ ಇಬ್ಬರೂ ಕೈ ಕೈ ಮಿಲಾಯಿಸಿ ಜೋರು ಧ್ವನಿಯಲ್ಲಿ ನಿಂದಿಸಿಕೊಂಡರು. ಭೀಮರಾವ್ ಪಾಟೀಲ್ ಅವರ ಹಿಂದೆ ಎಂಎಲ್‌ಸಿಯೂ ಆದ ಅವರ ಸಹೋದರ ಡಾ.ಚಂದ್ರಶೇಖರ್ ಪಾಟೀಲ್ ತೆರಳಿ ಬೆಂಬಲಕ್ಕೆ ನಿಂತರು. ಪರಿಸ್ಥಿತಿ‌ ಕೈ ಮೀರುತ್ತಿದ್ದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವೇದಿಕೆಯಿಂದ ಕೆಳಗಿಳಿದು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

ಘಟನೆ ನಡೆದ ಬಳಿಕ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ, ʼಕೆಡಿಪಿ ಸಭೆ ಮುಂದೂಡಲಾಗಿದೆ, ವಾರದೊಳಗೆ ಕೆಡಿಪಿ ಸಭೆ ನಡೆಸಲಾಗುವುದು ಎಂದು ಘೋಷಿಸಿ ಸಭೆ ಮೊಟಕುಗೊಳಿಸಿದರು.

ಸಭೆಯಲ್ಲಿ ಪರಸ್ಪರ ನಿಂದಿಸಿ, ಜಗಳ ಮಾಡಿದ ವಿಷಯ ಜಿಲ್ಲೆಯಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಶಾಸಕ ಸಿದ್ದಲಿಂಗಪ್ಪ ಪಾಟೀಲ್‌ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಭೀಮರಾವ್ ಪಾಟೀಲ್‌ ಅವರ ತವರು ಕ್ಷೇತ್ರ ಹುಮನಾಬಾದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗಿದೆ.

ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಮನೆ ಎದುರು ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹುಮನಾಬಾದ್ ಪಟ್ಟಣಕ್ಕೆ ತೆರಳಿದ್ದಾರೆ. ಪಟ್ಟಣದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಸಭೆಯಲ್ಲಿ ಸಚಿವ ರಹೀಂ ಖಾನ್, ಎಂಎಲ್ಸಿ ಎಂ.ಜಿ.ಮುಳೆ, ಸಿಇಓ ಗಿರೀಶ್ ಬದೋಲೆ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಮರಕುಮಾರ್‌ ಖಂಡ್ರೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...