ಔರಾದ್‌ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ವಿತರಣೆ : ಆರೋಪ

Date:

ಔರಾದ(ಬಿ) ತಾಲೂಕಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

- Advertisement -

ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ. ನಿಲಯದ ಆವರಣದಲ್ಲಿ ಅಗತ್ಯ ಸ್ವಚ್ಛತೆ ಕಾಪಾಡದಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ವಸತಿ ನಿಲಯದ ನಿಯಮಗಳಿಗೆ ವಿರುದ್ಧವಾಗಿ ಸ್ಥಳೀಯ ಗ್ರಾಮದ ಮಕ್ಕಳನ್ನು ವಸತಿ ಮಾಡಿಸಿಕೊಂಡು ನಿಲಯ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆರೋಪಗಳು ಸತ್ಯವೆಂದು ಕಂಡುಬಂದಲ್ಲಿ ತಪ್ಪಿತಸ್ಥ ತಾಲೂಕು ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಒದಗಿಸುವುದರ ಜೊತೆಗೆ, ನಿಯಮಾನುಸಾರ ವಸತಿ ನಿಲಯ ನಿರ್ವಹಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಣʼ ಮಾನವ ಸಮಾಜ ತಲೆತಗ್ಗಿಸುವ ಕೃತ್ಯ

ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಸಾಮಾಜಿಕ ಜಾಲತಾಣ ತಾಲೂಕಾಧ್ಯಕ್ಷ ದಾವಿದ ಎಕಲಾರಕರ್ ಸೇರಿದಂತೆ ಸೇನೆಯ ಪ್ರಮುಖರಾದ ಕಮಲ್ ಹಾಸನ್ ಬಾವಿದೊಡ್ಡಿ, ವೆಂಕಟರಾವ್ ಪಾಟೀಲ್, ವಿಶಾಲ ಚವ್ಹಾಣ, ಸಚೀನ ಗೌಳಿ, ವಿಶಾಲ ಕಮಲನಗರ, ಶಿವರಾಜ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...