ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರಾಗಿ ಚನ್ನಬಸವ ಭೂರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರೇಣುಕಾ ರಾಮಶೆಟ್ಟಿ ಆಯ್ಕೆಯಾಗಿದ್ದು, ಸದಸ್ಯರಾಗಿ ಕಾಮಶೆಟ್ಟಿ, ರತಿಕಾಂತ, ಹಣಮಂತ, ಅಶ್ವಿನಿ ಸೇರಿದಂತೆ ಒಟ್ಟು 16 ಜನರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಪನ್ಮೂಲ ಶಿಕ್ಷಕ ಶಿವಾನಂದ ಸ್ವಾಮಿ, ಶಾಲೆಯ ಮುಖ್ಯಗುರು ಸವಿತಾ ಎಂ. ಸೇರಿದಂತೆ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ ನಾವು ಎಡವಿದ್ದೇವೆಯೇ?




