ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನ್ನಭಾಗ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತು ಪಡಿತರ ವಿತರಕರೊಂದಿಗೆ ಸಭೆ ನಡೆಯಿತು.
ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು ಮಾತನಾಡಿ, ʼಅನ್ನಭಾಗ್ಯ ಯೋಜನೆ ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸಬೇಕು. ರೇಷನ್ ಡೀಲರ್‌ಗಳು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ಪಡಿತರ ವಿತರಣೆಯಲ್ಲಿ ಕಮಿಟಿಗೆ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼ ಎಂದರು.
ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, ʼರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುವಂತೆ ಗ್ರಾಮ ಮಟ್ಟದಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಲಾಭವು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದರು.
ಇದನ್ನೂ ಓದಿ : ಬೀದರ್ | ದೇಶದ ಸರ್ವತೋಮುಖ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್ : ಸಚಿವ ಈಶ್ವರ ಖಂಡ್ರೆ
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಬಾಳಾಸಾಹೇಬ್ ಪಾಟೀಲ್, ಸದಸ್ಯರಾದ ಶಿವಕುಮಾರ ಪಾಟೀಲ್, ಶಂಕರ ಪಾಟೀಲ್, ಡಿ.ಕೆ.ಚಂದು, ಸಂಜುಕುಮಾರ ಉಜನಿ, ಚೆನ್ನಬಸಪ್ಪ ಕೌಠಾ ಹಾಗೂ ಸಿಡಿಪಿಒ, ಕೆಇಬಿ, ಆಹಾರ ಇಲಾಖೆ, ಯುವನಿಧಿ, ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ ಸಿಬ್ಬಂದಿಯವರು ಉಪಸ್ಥಿತರಿದ್ದರು




