ಔರಾದ್‌ | ಕುಡಿಯುವ ನೀರಿನ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಯತ್ನಿಸಿ : ಶಾಸಕ ಪ್ರಭು ಚವ್ಹಾಣ

Date:

ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆ ಔರಾದ್‌ ಕ್ಷೇತ್ರದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಏ.2ರಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ʼಅನೇಕ ಕಡೆಗಳಲ್ಲಿ ಬೋರ್‌ವೆಲ್ ರಿಪೇರಿ, ಪೈಪ್ ದುರಸ್ತಿ, ವಿದ್ಯುತ್ ತಂತಿಗಳಲ್ಲಿ ದೋಷದಂತಹ ಸಣ್ಣ ಸಮಸ್ಯೆಗಳಿದ್ದರೂ ನೀರಿನ ಪೂರೈಕೆ ಸ್ಥಗತಗೊಳ್ಳುತ್ತಿರುವುದು ಕಂಡುಬರುತ್ತಿದೆ. ಸಣ್ಣ-ಪುಟ್ಟ ಸಮಸ್ಯೆಗಳಿದ್ದಲ್ಲಿ ತಕ್ಷಣ ದುರಸ್ತಿ ಕೈಗೊಂಡು ನೀರಿನ ಪೂರೈಕೆ ಆರಂಭಿಸಬೇಕುʼ ಎಂದು ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೆಲವೊಂದು ಗ್ರಾಮಗಳಲ್ಲಿ ಸಾಕಷ್ಟು ಜಲಮೂಲ ಇದ್ದರೂ ಕೂಡ ನಿಷ್ಕ್ರಿಯ ವಾಟರ್‌ಮೆನ್‌ಗಳಿಂದಾಗಿ ನೀರು ಸರಬರಾಜಿಗೆ ತೊಡಕಾಗುತ್ತಿದೆ ಎಂದು ಗ್ರಾಮಸ್ಥರು ದೂರು ನೀಡುತ್ತಿದ್ದಾರೆ. ಇಂಥವರನ್ನು ಗುರುತಿಸಿ ಯಾವುದೇ ಮುಲಾಜಿಲ್ಲದೇ ಅಮಾನತುಗೊಳಿಸಿ ಉತ್ತಮರನ್ನು ನೇಮಿಸಿಕೊಳ್ಳಿ. ಇಲ್ಲವಾದರೆ ತಾವೇ ಹೊಣೆಗಾರರಾಗಬೇಕಾಗುತ್ತದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಿಳೆಯರು ಕೊಡ ಹಿಡಿದು ಅಲೆಯುವ ಪರಿಸ್ಥಿತಿ ಕಾಣಬಾರದು :

ʼಮುಂದಿನ 2 ತಿಂಗಳು ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿರುತ್ತವೆ. ಹಾಗಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲಿರುವ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ತುರ್ತು ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ನೀರು ಪೂರೈಸಿ, ಖಾಸಗಿ ಬೋರ್‌ವೆಲ್‌ಗಳಿದ್ದಲ್ಲಿ ಅವರ ಮನವೊಲಿಸಿ ನೀರು ಪಡೆಯಲು ಮುಂದಾಗಬೇಕು. ಕ್ಷೇತ್ರದ ಯಾವುದೇ ಗ್ರಾಮದಲ್ಲಿ ನೀರಿನ ಕೊರತೆ ಎದುರಾಗಬಾರದು. ಮಹಿಳೆಯರು ಕೊಡಗಳನ್ನು ಹಿಡಿದು ಬೀದಿ ಬೀದಿ ಅಲೆಯುವ ಪರಿಸ್ಥಿತಿ ಎಲ್ಲಿಯೂ ಕಾಣಬಾರದುʼ ಎಂದು ಹೇಳಿದರು.

ʼಬೇಸಿಗೆ ಮುಗಿಯುವವರೆಗೆ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ತಮ್ಮ ಮೊಬೈಲ್ ಫೋನ್‌ಗಳನ್ನು ಚಾಲ್ತಿಯಲ್ಲಿ ಇಟ್ಟುಕೊಂಡು, ಸಾರ್ವಜನಿಕರ ದೂರವಾಣಿ ಕರೆಗಳಿಗೆ ಸ್ಪಂದಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇಂತಹ ಸಂದರ್ಭದಲ್ಲಿ ರಜೆ, ಗೈರು ಹಾಜರಾಗುವುದು ಮಾಡುವಂತಿಲ್ಲ. ಎಲ್ಲ ಅಧಿಕಾರಿಗಳು ಜನತೆಗೆ ಲಭ್ಯವಿರಬೇಕುʼ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಬೀದರ್‌ ಜಿಲ್ಲೆಯ ಅರ್ಧದಷ್ಟು RO ಪ್ಲಾಂಟ್‌ಗಳಲ್ಲಿ ನೀರೇ ಇಲ್ಲ; ಕೋಟ್ಯಂತರ ಅನುದಾನ ಹರಿದದ್ದು ಎಲ್ಲಿಗೆ?

ನೀರಿನ ಸಮಸ್ಯೆ ನಿವಾರಣೆಗೆ ತಂಡ ರಚಿಸಿ :

ಕುಡಿಯುವ ನೀರಿನ ಸಮಸ್ಯೆಯ ಕುರಿತು ನಿಗಾ ವಹಿಸಲು ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತಹಸೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ, ಜೆಸ್ಕಾಂ ಎಇಇ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿಕೊಂಡು ಗ್ರಾಮಗಳಲ್ಲಿ ಸಂಚರಿಸಿ ನೀರಿನ ಸಮಸ್ಯೆ, ಜೆಜೆಎಂ ಕಾಮಗಾರಿಯ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ನೀರು ಸರಬರಾಜು ಕಾಮಗಾರಿಗಳು ಹೇಗೆ ನಡೆದಿವೆ ? ಶಾಶ್ವತ ಪರಿಹಾರಕ್ಕೆ ಏನು ಮಾಡಬಹುದೆಂಬ ಅಭಿಪ್ರಾಯಗಳನ್ನು ಕೊಡಬೇಕು ಎಂದು ತಿಳಿಸಿದರು.

ಗುತ್ತಿಗೆದಾರರು, ಅಧಿಕಾರಿಗಳಿಂದ ಹಳ್ಳ ಹಿಡಿದ ಜೆಜೆಎಂ : 

ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದರೂ ಕೂಡ ಕಾಮಗಾರಿಗಳನ್ನು ಹಸ್ತಾಂತರ ಮಾಡಿಕೊಂಡಿರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ಕಾಮಗಾರಿಯನ್ನು ಪರೀಶೀಲಿಸದೇ ಹಸ್ತಾಂತರ ಮಾಡಿಕೊಳ್ಳಬೇಡಿ ಎಂದು ಹೇಳುತ್ತಾ ಬಂದರೂ ಕೂಡ ಕ್ಷೇತ್ರದಾದ್ಯಂತ 153 ಕಾಮಗಾರಿಗಳನ್ನು ಹಸ್ತಾಂತರ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾದರೆ ಯಾರು ಹೊಣೆಗಾರರಾಗುತ್ತಾರೆ? ನೀರು ಲಭ್ಯವಿದ್ದು, ಎಲ್ಲ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದರೆ ಮಾತ್ರ ಹರ್ ಘರ್ ಜಲ್ ಘೋಷಣೆ ಮಾಡಬೇಕೆಂಬ ನಿಯಮವಿದೆ. ಆದರೆ ಬಹಳಷ್ಟು ಕಡೆಗಳಲ್ಲಿ ಕೆಲಸ ಇನ್ನು ಬಾಕಿ ಇದ್ದರೂ ಕೂಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಆಮಿಷ ನೀಡಿ ಕಾಮಗಾರಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿ ಸರಿಯಾಗಿ ಮಾಡಲು ತೋರದ ಆಸಕ್ತಿ ಹಸ್ತಾಂತರಕ್ಕೆ ಏಕೆ ತೋರಿಸುತ್ತಿದ್ದೀರಿ? ಇದರಲ್ಲಿ ದೊಡ್ಡ ಗೋಲ್‌ಮಾಲ್ ನಡೆದಿರುವುದು ಕಂಡುಬರುತ್ತಿದೆ ಎಂದು ಬೇಸರ ಹೊರ ಹಾಕಿದರು.

ʼನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಸದಾಶಯದೊಂದಿಗೆ ಕ್ಷೇತ್ರಕ್ಕೆ ₹250 ಕೋಟಿಗೂ ಹೆಚ್ಚು ಅನುದಾನದಿಂದ ಕಾಮಗಾರಿ ಆರಂಭಿಸಲಾಗಿದೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಸೇರಿಕೊಂಡು ಸಂಪೂರ್ಣ ಯೋಜನೆಯನ್ನು ಹಳ್ಳ ಹಿಡಿಸಿದ್ದಾರೆ. ಗ್ರಾಮ ಸಂಚಾರದ ಸಂದರ್ಭದಲ್ಲಿ ಬಹಳಷ್ಟು ಗ್ರಾಮಗಳಲ್ಲಿ ಜೆಜೆಎಂ ಯೋಜನೆಯ ಬಗ್ಗೆ ದೂರುಗಳು ಬಂದಿವೆ. ಹರ್ ಘರ್ ಜಲ್ ಘೋಷಿಸಿದ ಗ್ರಾಮಗಳಲ್ಲಿ ನಾನು ಪರಿಶೀಲನೆ ಮಾಡಿಸಿದ್ದು, ಕೆಲ ಗ್ರಾಮಗಳನ್ನು ಹೊರತುಪಡಿಸಿ ಬಹುತೇಕ ಸಂಪೂರ್ಣ ಕಾಮಗಾರಿಗಳು ಕಳಪೆಯಾಗಿವೆ. ಕೆಲವೊಂದು ಕಡೆ ಒಂದು ಬಾರಿಯೂ ನೀರು ಹರಿಸದೇ ಕಾಮಗಾರಿ ಹಸ್ತಾಂತರ ಮಾಡಿಕೊಳ್ಳಲಾಗಿದೆ. ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕ್ರಮವಾಗಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಬತ್ತಿದ ಬಾವಿ, ಒಣಗಿದ ಬೋರ್‌ವೆಲ್; ಟ್ಯಾಂಕರ್ ನೀರೂ ಇಲ್ಲದಿದ್ರೆ ಅಧೋಗತಿ!

ಔರಾದ ತಹಸೀಲ್ದಾರ ಮಹೇಶ ಪಾಟೀಲ, ಕಮಲನಗರ ತಹಸೀಲ್ದಾರ ಅಮಿತ ಕುಲಕರ್ಣಿ, ಔರಾದ ತಾಲ್ಲೂಕು ಪಂಚಾಯತ್ ಇಓ ಕಿರಣ ಪಾಟೀಲ, ಕಮಲನಗರ ಇಓ ಹಣಮಂತರಾಯ ಕೌಟಗೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜೆಸ್ಕಾಂ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ ₹5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...