ಔರಾದ್‌ | ಗುಳೆ ತಪ್ಪಿಸಲು ಮನರೇಗಾ ಕಾಮಗಾರಿಗೆ ಒತ್ತು : ಶಿವಕುಮಾರ ಘಾಟೆ

Date:

ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ಹೊರ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ಮಟ್ಟದಲ್ಲೇ ಮನರೇಗಾ ಯೋಜನೆಯಡಿ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದ್ದಾರೆ.

- Advertisement -

ಔರಾದ್ ತಾಲೂಕಿನ ಜೋಜನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೋರ್ಗಿ(ಜೆ) ಗ್ರಾಮದಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರೊಂದಿಗೆ ರೋಜ್‌ಗಾರ ದಿವಸ ಕಾರ್ಯಕ್ರಮ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ʼಬೇಸಿಗೆಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿ ಇರದಿರುವುದಕ್ಕೆ ಜನರು ನಗರಗಳಿಗೆ ವಲಸೆ ಹೋಗುವುದು ಸಹಜವಾಗಿದೆ. ಅದನ್ನು ತಪ್ಪಿಸಲು ದುಡಿಯುವ ಕೈಗಳಿಗೆ ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಮನರೇಗಾ ಯೋಜನೆಯಡಿ ಗಂಡು-ಹೆಣ್ಣು ಕಾರ್ಮಿಕರಿಗೆ ದಿನಕ್ಕೆ ₹370ರಷ್ಟು ಸಮಾನ ದಿನಗೂಲಿ ನೀಡಲಾಗುತ್ತಿದ್ದು, ಪ್ರತಿ ಅರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ಒದಗಿಸಲಾಗುತ್ತಿದೆʼ ಎಂದು ಹೇಳಿದರು.

ʼಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ಬೆಳಿಗ್ಗೆ ಬೇಗ ಆರಂಭಿಸಿ, ಮಧ್ಯಾಹ್ನ ವಿರಾಮದ ನಂತರ ಮತ್ತೆ ಮುಂದುವರಿಸಲು ಕ್ರಮ ಕೈಗೊಳ್ಳಬೇಕು. ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಅಗತ್ಯವಿರುವ ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕುʼ ಎಂದರು.

ಪ್ರಧಾನ ಮಂತ್ರಿ ಭೀಮಾ ಸುರಕ್ಷಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು. ಎನ್‌ಎಮ್‌ಎಮ್‌ಎಸ್ ಮೂಲಕ ಹಾಜರಾತಿಯನ್ನು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ದಾಖಲಿಸುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಜೋಜನಾ ಗ್ರಾಮ ಪಂಚಾಯತಿ ಪಿಡಿಒ ನರಸಿಂಗ ಮಾನೆ ಮಾತನಾಡಿ, ʼಮನರೇಗಾ ಯೋಜನೆಯಡಿ ಗ್ರಾಮದಲ್ಲಿನ ಅರ್ಹ ಕುಟುಂಬಗಳಿಗೆ ಮನರೇಗಾ ಯೋಜನೆಯಡಿ ಉದ್ಯೋಗ ಒದಗಿಸಲು ಆದ್ಯತೆ ನೀಡಲಾಗುತ್ತಿದ್ದು, ಕಾರ್ಮಿಕರು ಸಕಾಲಕ್ಕೆ ಕೆಲಸಕ್ಕೆ ಹಾಜರಾಗಬೇಕು ಹಾಜರಾತಿ ದಾಖಲಿಸಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | 371(ಜೆ) ಜಾರಿಯಾದರೂ ಕಲ್ಯಾಣ ಕರ್ನಾಟಕ ʼಚಹರೆʼ ಬದಲಾಗಲಿಲ್ಲ

ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಡಿಇಒ ನಾಗನಾಥ ಕುಂಟೆ, ತಾಂತ್ರಿಕ ಸಹಾಯಕ ಅಮರ, ಚಂದ್ರಕಾಂತ ಪಾಟೀಲ್, ಗ್ರಾಮಸ್ಥ ಉಮಾಕಾಂತ ವಿಳಸಪೂರೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...