ಔರಾದ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Date:

ಔರಾದ್‌ ತಾಲೂಕಿನ ಚಿಂತಾಕಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

- Advertisement -

ಶಾಲೆಯ 6ನೇ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರು ಸಮರ್ಪಕ ಯೋಜನೆ ಮತ್ತು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಚಿಂತಾಕಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಮರೆಡ್ಡಿ ಕೌಡಾಳೆ ಮಾತನಾಡಿ, ʼಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಶಿಸ್ತು ಜೀವನದ ಯಶಸ್ಸಿನ ಮಂತ್ರಗಳಾಗಿವೆ. ಶಿಕ್ಷಣವೇ ಜೀವನವನ್ನು ರೂಪಿಸುವ ಶಕ್ತಿ, ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ ಉನ್ನತ ಗುರಿಗಳನ್ನು ಸಾಧಿಸಬೇಕುʼ ಎಂದು ಸಲಹೆ ನೀಡಿದರು.

WhatsApp Image 2026 02 22 at 9.32.25 PM

ಬರುವ ಎಸ್‌‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 100 ಪ್ರತಿಶತ ಅಂಕಗಳನ್ನು ಗಳಿಸುವ ವಿದ್ಯಾರ್ಥಿನಿಗೆ 10 ಸಾವಿರ ನಗದು ಬಹುಮಾನ ನೀಡುವುದಾಗಿ ಅವರು ಘೋಷಿಸಿದ ಅವರು ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಪ್ಯಾಡ್ ಹಾಗೂ ಪೆನ್ನುಗಳನ್ನು ವಿತರಿಸಿದರು.

ಶಿಕ್ಷಕ ಕಿಶೋರ್ ಅವರು ಮಾತನಾಡಿ, ʼಗುರು ಮತ್ತು ಶಿಷ್ಯರ ಅವಿನಾಭಾವ ಸಂಬಂಧ ಅನನ್ಯವಾಗಿದೆ. ಸತತ ಅಧ್ಯಯನ ನಿರಂತರ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯವಿದೆ. ಎಲ್ಲ ವಿದ್ಯಾರ್ಥಿಗಳು ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | 2 ದಿನಗಳ ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳಕ್ಕೆ ಚಾಲನೆ ನೀಡಿದ ಸಚಿವ ಈಶ್ವರ ಖಂಡ್ರೆ

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪಂಡರಿ ಗಾಯಕವಾಡ, ಶಿಕ್ಷಕರಾದ ಕಪಿಲ್ ಡೊಂಗ್ರೆ, ರೇಣುಕಾ ಜೈಪಾಲರೆಡ್ಡಿ, ಸಿಕಂದರ್ ಮಧುಸೂದನ, ಗೌರಿ ವಿಲ್ಫ್ರೆಡ್, ಜೋತಿ ಸೇರಿದಂತೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...