ಔರಾದ್‌ | ಗಡಿಭಾಗದಲ್ಲಿ ಕನ್ನಡತನ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ : ಪ್ರಕಾಶ ದೇಶಮುಖ

Date:

ಗಡಿಭಾಗದಲ್ಲಿ ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಸಂಪನ್ಮೂಲ ಶಿಕ್ಷಕ ಪ್ರಕಾಶ ದೇಶಮುಖ ಅಭಿಪ್ರಾಯಪಟ್ಟರು.

- Advertisement -

ಔರಾದ್‌ ತಾಲೂಕಿನ ಸಂತಪೂರ ಗ್ರಾಮದ ಆನಂದ ಪ್ರೌಢ ಶಾಲೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಹಾಗೂ ಜಿಲ್ಲಾ ಘಟಕ ಬೀದರ್‌ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ ʼಗಡಿಭಾಗದಲ್ಲಿ ಕನ್ನಡ ಭಾಷೆಯ ಉಳಿವುʼ ವಿಷಯ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಗಡಿಭಾಗದಲ್ಲಿ ಕನ್ನಡ ಶಾಲೆಗಳ ಸಂಖ್ಯೆ ಕುಸಿಯುತ್ತಿದ್ದು, ಆಂಗ್ಲ ಮಾಧ್ಯಮದ ಪ್ರಭಾವ ಹೆಚ್ಚುತ್ತಿದೆ. ಇದರಿಂದ ಮಕ್ಕಳಿಗೆ ಕನ್ನಡ ಶಿಕ್ಷಣ ದೊರೆಯದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕನ್ನಡ ಭಾಷೆಯ ಉಳಿವಿಗಾಗಿ ಸರ್ಕಾರ ಹಾಗೂ ಸಮಾಜ ಜಂಟಿಯಾಗಿ ಕೈಜೋಡಿಸಬೇಕು. ಗಡಿಭಾಗಗಳಲ್ಲಿ ಕನ್ನಡ ಶಾಲೆಗಳನ್ನು ಬಲಪಡಿಸಬೇಕು. ಕನ್ನಡ ಶಿಕ್ಷಕರ ನೇಮಕಾತಿ, ಗ್ರಂಥಾಲಯಗಳ ಸ್ಥಾಪನೆ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದರು.

WhatsApp Image 2026 05 26 at 5.29.50 PM
ಕರ್ನಾಟಕ ವಿದ್ಯಾವರ್ಧಕ ಸಂಘದ ಜಿಲ್ಲಾ ಸಂಯೋಜಕ ಮಹೇಶ ಗೋರನಾಳಕರ್‌ ಮಾತನಾಡಿದರು.

ಉಪನ್ಯಾಸಕ ದತ್ತಾತ್ರಿ ಮಡಿವಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಕರ್ನಾಟಕದ ವಿದ್ಯಾಕಾಶಿ ಎಂದೇ ಖ್ಯಾತಿ ಪಡೆದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವು ನಾಡಿನ ಪ್ರಮುಖ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸಂಘದೊಂದಿಗೆ ನಿಕಟ ಸಂಬಂಧ ಹೊಂದಿದ ಅನೇಕ ಲೇಖಕ, ಸಾಹಿತಿಗಳು ಕರ್ನಾಟಕತ್ವವನ್ನು ದೇಶದೆಲ್ಲೆಡೆ ಪಸರಿಸಿದ್ದಾರೆ. ಇದೀಗ ವಿದ್ಯಾವರ್ಧಕ ಸಂಘವು ನಾಡಿನಾದ್ಯಂತ ಸಾಹಿತ್ಯ, ಸಂಸ್ಕೃತಿ, ಭಾಷೆಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಜಿಲ್ಲಾ ಸಂಯೋಜಕ ಮಹೇಶ ಗೋರನಾಳಕರ್‌ ಮಾತನಾಡಿ, ʼಯುವಜನರು ಇತರ ಭಾಷೆಗೆ ಗೌರವಿಸುವ ಜೊತೆಗೆ ಕನ್ನಡ ಬಳಕೆಗೆ ಹೆಚ್ಚು ಒತ್ತು ನೀಡಬೇಕು. ಮನೆಗಳಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲೇ ಮಾತನಾಡುವ ಅಭ್ಯಾಸ ಬೆಳೆಸಬೇಕು. ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡಬೇಕೆಂದು ಹೇಳಿದ ಅವರು, ಗಡಿಭಾಗದಲ್ಲಿ ಕನ್ನಡದ ಬಹುತ್ವ ಸಂಸ್ಕೃತಿ ಉಳಿಸಿ ಬೆಳೆಸಲು ಕಲೆ, ಸಾಹಿತ್ಯಿಕ ಕಾರ್ಯಕ್ರಮ ಆಯೋಜನೆ, ಹೊಸ ತಲೆಮಾರಿನ ಬರಹಗಾರರನ್ನು ಗುರುತಿಸುವ ಕೆಲಸ ಸಂಘದಿಂದ ನಡೆಸಲಾಗುವುದುʼ ಎಂದು ಭರವಸೆ ನೀಡಿದರು.

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ ಮಾತನಾಡಿ,ʼಕನ್ನಡ ಭಾಷೆಯ ಬೆಳವಣಿಗೆಯ ಜೊತೆಗೆ ಪರಿಸರ ಉಳಿಸುವ ಕಾರ್ಯವೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಭಾಷೆ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಗುರುತಿನ ಪ್ರತೀಕವಾಗಿದ್ದರೆ, ಪರಿಸರ ನಮ್ಮ ಜೀವನದ ಆಧಾರವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವುದು ಒಂದು ಕಡೆ ಚಿಂತೆಯ ವಿಷಯವಾಗಿದ್ದರೆ, ಮತ್ತೊಂದು ಕಡೆ ಪರಿಸರ ಮಾಲಿನ್ಯ ಮತ್ತು ಅರಣ್ಯ ನಾಶವೂ ದೊಡ್ಡ ಸಮಸ್ಯೆಯಾಗಿದೆ. ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ-ಮರ ಬೆಳೆಸಲು ಮುಂದಾಗೋಣʼ ಎಂದರು.

WhatsApp Image 2026 05 26 at 6.10.35 PM
ಕಾರ್ಯಕ್ರಮದಲ್ಲಿ ಮಕ್ಕಳಿಂದ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಸಾಹಿತಿ, ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, ʼಬಹುಭಾಷಾ ಅಸ್ತಿತ್ವ ಈ ನೆಲದ ಅಸ್ಮಿತೆಗೆ ಮೆರುಗು ತಂದುಕೊಟ್ಟಿದೆ. ಬಹುಭಾಷಾ ಸಂಗಮ ಭೂಮಿಯಾಗಿರುವ ಔರಾದ್ ತಾಲೂಕಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯಗಳ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕಾಗಿದೆ. ಅನ್ಯಭಾಷೆಗಳ ಪ್ರಭಾವದಿಂದ ನಲಗುತ್ತಿರುವ ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಮತ್ತು ನಮ್ಮ ಆಸ್ಮಿತೆಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಅಗತ್ಯ ಕಾರ್ಯಕ್ರಮಗಳ ಮುಖಾಂತರ ಸರ್ಕಾರದ ಗಮನ ಸೆಳೆಯಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಬಿರುಗಾಳಿ ಮಳೆ : ಮನೆ ಮೇಲಿಂದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವು

ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿ ಅನೀಲ ಪಾಟೀಲ್‌ ಧುಪತಮಹಾಗಾಂವ್‌, ನ್ಯಾಯವಾದಿ ಪ್ಯಾರುಸಾಬ್‌ ಶೇಖ್‌, ಶಿಕ್ಷಕರಾದ ರಾಜರೆಡ್ಡಿ, ಮಾಲಸ್ವಾಮಿ, ಶೀಲಾವತಿ, ಕಲ್ಪನಾ, ಉಮಾಕಾಂತ, ಭೀಮಾಶಂಕರ ವೈರಾಗ್ಯ, ರವಿ ಚವ್ಹಾಣ, ಕರಣ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದರು.


eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಮುಂಬೈನಲ್ಲಿ ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಗಾಂಧಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮುಂಬೈನ...

ಶಿವಮೊಗ್ಗ | ಜಿಪಂ, ತಾಪಂ ಮೀಸಲಾತಿ ಕರಡು ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಸಲು ಅ. 19 ಕೊನೆಯ ದಿನಾಂಕ

ಶಿವಮೊಗ್ಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣಾ ಕ್ಷೇತ್ರಗಳ ಮೀಸಲಾಟ ಕರಡು...