ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

Date:

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ ಜಿಲ್ಲಾ ಮಟ್ಟದ ಖೋಖೋ ಕ್ರೀಡಾಕೂಟದಲ್ಲಿ ಔರಾದ್ ತಾಲೂಕಿನ ಕೌಡಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ವಿಜಯಶಾಲಿಯಾಗಿದೆ.

- Advertisement -

ಪಂದ್ಯಾವಳಿಯಲ್ಲಿ ಭಾಲ್ಕಿ ತಾಲೂಕಿನ ಸಾಯಗಾಂವ ಶಾಲೆಯ ತಂಡವನ್ನು ಸೋಲಿಸಿದ ಕೌಡಗಾಂವ ಶಾಲೆಯ ಬಾಲಕಿಯರು ಜಿಲ್ಲಾ ಮಟ್ಟದಲ್ಲಿ ಜಯಭೇರಿ ಬಾರಿಸುವ ಮೂಲಕ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2026 10 17 at 9.14.50 AM 1

ವಿದ್ಯಾರ್ಥಿನಿಯರ ಈ ಯಶಸ್ಸಿನ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕಿ ಶಿವಲೀಲಾ ಅವರ ಮಾರ್ಗದರ್ಶನ, ನಿರಂತರ ತರಬೇತಿ ಹಾಗೂ ತಂಡದ ಪರಿಶ್ರಮ ಪ್ರಮುಖ ಪಾತ್ರ ವಹಿಸಿವೆ. ತಂಡದ ವ್ಯವಸ್ಥಾಪಕರಾದ ಮಂಗಲಾ, ಲಾಲಪ್ಪ, ಸತೀಶ್ ಬಿರಾದಾರ ಸರ್ ಹಾಗೂ ಪುಂಡಲಿಕ್ ಅವರು ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದ್ದಾರೆ.

ತಂಡದ ನಾಯಕರಾದ ಪ್ರಕೃತಿ ಹಾಗೂ ಸಂಜನಾ ಸೇರಿದಂತೆ ವಿದ್ಯಾರ್ಥಿಗಳಾದ ಮಹೇಶ್ವರಿ, ಸಂತೋಷಿ, ಖುಷಿ, ಲಕ್ಷ್ಮೀ, ವಿಜಯಲಕ್ಷ್ಮೀ, ದಿವ್ಯಾ, ಭವಾನಿ, ಸುಹನಾ, ಸ್ನೇಹ ಹಾಗೂ ಅಂಕಿತಾ ಅವರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ ಗೆಲುವಿನ ನಗೆ ಬೀರಿದ್ದಾರೆ.

WhatsApp Image 2026 10 10 at 7.46.08 PM 12
ಜಾಹೀರಾತು

ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ತೋರಿದ ಈ ಸಾಧನೆ ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಮತ್ತು ಹೆಮ್ಮೆ ಮೂಡಿಸಿದೆ.

ಇದನ್ನೂ ಓದಿ : ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...