ಔರಾದ್‌ | ಪತ್ರಕರ್ತರ ಬಗ್ಗೆ ಹಗುರ ಮಾತು : ಶಾಸಕ ಪ್ರಭು ಚವ್ಹಾಣ ಕ್ಷಮೆಗೆ ಸುಧಾಕರ ಕೊಳ್ಳೂರ ಒತ್ತಾಯ

Date:

ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ ವಿರುದ್ಧ ಏರುಧ್ವನಿಯಲ್ಲಿ ಮಾತನಾಡಿರುವ ಶಾಸಕ ಪ್ರಭು ಚವ್ಹಾಣ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳೂರ ಒತ್ತಾಯಿಸಿದ್ದಾರೆ.

- Advertisement -

ಔರಾದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಪ್ರಭು ಚವ್ಹಾಣ ಅವರು ತಮ್ಮ ಭಾಷಣದಲ್ಲಿ ಸಂಘಟನೆಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ʼಶಾಸಕ ಪ್ರಭು ಚವ್ಹಾಣ ಅವರ ಪ್ರಕಾರ ತಾಲೂಕಿನಲ್ಲಿ ನಡೆದ ಕಳಪೆ ಕಾಮಗಾರಿ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಬೆಳಕಿಗೆ ತರುವ ಸಂಘಟನೆಗಳ ಮತ್ತು ಮಾಹಿತಿ ಪಡೆದು ನ್ಯಾಯಾಲಯಗಳಲ್ಲಿ ಪಿಎಲ್ಐ ಹಾಕುವವರೆಲ್ಲ ದೇಶದ್ರೋಹಿಗಳೇ? ಶಾಸಕರ ಪ್ರತಿಯೊಂದು ಸುದ್ದಿ ಬಿತ್ತರಿಸುವ ನಿಷ್ಠಾವಂತ ಪತ್ರಕರ್ತರು ವಿರೋಧಿಗಳೇ? ಈ ಬಗ್ಗೆ ಶಾಸಕರು ಪತ್ರಕರ್ತರಿಗೆ, ಸಂಘಟನೆಗಳ ಮುಖಂಡರಿಗೆ ಕೂಡಲೇ ಕ್ಷಮೆ ಕೇಳಬೇಕುʼ ಎಂದು ಆಗ್ರಹಿಸಿದ್ದಾರೆ.

ʼನಾಲ್ಕು ಅವಧಿಗೆ ಆಯ್ಕೆಯಾದ ಶಾಸಕ ಪ್ರಭು ಚವ್ಹಾಣ ಅವರು ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಕೈಗೊಂಡಿಲ್ಲ. ಎಲ್ಲಾ ಕಾಮಗಾರಿಗಳಲ್ಲಿ ಕಮಿಷನ್ ಪಡೆದು ತಾವೇ ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ. ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣವಾಗಿ ಹಾಳಾಗಲು ಶಾಸಕ ಚವ್ಹಾಣ ಅವರೇ ನೇರ ಕಾರಣʼ ಎಂದು ಕೊಳ್ಳೂರು ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಫೆ.3ರಂದು SIR ವಿರೋಧಿಸಿ ಚಿಂತನ-ಮಂಥನ ಸಮಾವೇಶ

ಸರ್ಕಾರಿ ಕಾರ್ಯಕ್ರಮದಲ್ಲಿ ಸಂಘಟನೆಗಳಿಗೆ ಮತ್ತು ಪತ್ರಕರ್ತರಿಗೆ ವೇದಿಕೆಯಿಂದಲೇ ಧಮ್ಕಿ ಹಾಕುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಶಾಸಕ ಪ್ರಭು ಚವ್ಹಾಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ...

ಹುಲಸೂರ ತಾಲೂಕು ʼಬರʼ ಘೋಷಣೆಗೆ ಸೆ.27ರ ಗಡುವು: 6 ದಿನಗಳ ಧರಣಿ ಕೊನೆಗೊಳಿಸಿದ ರೈತರು

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ...