ಔರಾದ್‌ | ʼನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

Date:

ಔರಾದ್ ತಾಲೂಕಿನ ಸಂತಪೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮಸ್ಥರಿಗೆ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಪಡೆಯಲು ಅನುಕೂಲವಾಗುವ ಉದ್ದೇಶದಿಂದ “ನನ್ನ ಸ್ವತ್ತು ನನ್ನ ಹಕ್ಕು” ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಚಾಲನೆ ನೀಡಿದರು.

- Advertisement -

ಬಳಿಕ ಅವರು ಮಾತನಾಡಿ “ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮನೆಗಳ ಮಾಲೀಕರು ತಮ್ಮ ಆಸ್ತಿ ಸಂಬಂಧಿತ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಆಸ್ತಿಗಳ ಡಿಜಿಟಲೀಕರಣ ಖಾತೆಯನ್ನು ಪಡೆಯಬೇಕು. ಇಂದು ಒಟ್ಟು 47 ಅರ್ಜಿಗಳು ಸ್ವೀಕರಿಸಲಾಗಿದ್ದು, 9 ಇ-ಸ್ವತ್ತು ದಾಖಲೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ಹಾಗೂ ಪ್ರಕ್ರಿಯೆ ಪ್ರಗತಿಯಲ್ಲಿದೆ. ಗ್ರಾಮಸ್ಥರು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ತಮ್ಮ ಮನೆಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಇ-ಸ್ವತ್ತು ಖಾತೆ ಪಡೆಯಬೇಕು” ಎಂದು  ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಶಿವಕುಮಾರ ಘಾಟೆ ಮಾತನಾಡಿ, “ನನ್ನ ಸ್ವತ್ತು ನನ್ನ ಹಕ್ಕು ಈ ಮಹತ್ವಾಕಾಂಕ್ಷಿ ಅಭಿಯಾನದಲ್ಲಿ ಸಾರ್ವಜನಿಕರು ಪಾಲ್ಗೊಂಡು, ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ ತಮ್ಮ ಆಸ್ತಿಯ ಇ-ಸ್ವತ್ತು ಮೂಲಕ ಡಿಜಿಟಲ್ ಖಾತೆ ಪಡೆಯಬೇಕು. ಈಗಾಗಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಗ್ರಾಮದ ಮನೆ-ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಇದನ್ನೂ ಓದಿ : ಬೀದರ್‌ | ಆರೋಗ್ಯ ಪ್ರಜ್ಞೆ ಸಾಮಾಜಿಕ ಬೆಳವಣಿಗೆಯ ರಹದಾರಿ : ಡಾ.ಅಭಯ ಸಮದರೆ

ಅಭಿಯಾನದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ್, ಅಮರ ಬಿರಾದಾರ್, ಶಂಕರಸ್ವಾಮಿ, ರಾಜಕುಮಾರ್, ನಸೀರೊದ್ದಿನ್, ಗುಂಡಪ್ಪ ತಳಘಾಟೆ, ಇರ್ಫಾನ್, ಕುಂದನಾಬಾಯಿ, ಶೋಭಾವತಿ, ಸುಮಿತ್ರಾದೇವಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್

“ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ...

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...

ಸೌಜನ್ಯ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಎಸ್‌ಐಟಿ ನೋಟಿಸ್ ಸಾಧ್ಯತೆ

ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ...