ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಮೇರೆಗೆ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರಾಜಶೇಖರ ಎಂಬುವವರಿಗೆ ಸೇರಿದ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ರಾಜಶೇಖರ ಅವರು ಅಗತ್ಯ ವೈದ್ಯಕೀಯ ಪದವಿ ಅಥವಾ ಅರ್ಹತೆ ಪಡೆಯದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸೋಮವಾರ (ಸೆ.28) ಮಧ್ಯಾಹ್ನ ಅಧಿಕಾರಿಗಳ ತಂಡ ಕ್ಲಿನಿಕ್ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಕ್ಲಿನಿಕ್ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ
ಕಾರ್ಯಾಚರಣೆಯಲ್ಲಿ ಜಿಲ್ಲಾ ಕೆಪಿಎಂಇ ನೋಡಲ್ ಅಧಿಕಾರಿ ಡಾ.ದಿಲೀಪ್ ಡೋಂಗ್ರೆ, ಔರಾದ್ ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲಕುಮಾರ್, ಕೆಪಿಎಂಇ ವಿಷಯ ನಿರ್ವಾಹಕ ಮಹೇಶ್ವರ್ ರೆಡ್ಡಿ, ಬಲಭೀಮ್ ಮತ್ತಿತರರು ಉಪಸ್ಥಿತರಿದ್ದರು.




