ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

Date:

ಬಂಜಾರಾ ಸಮಾಜವು ಅನಕ್ಷರತೆ, ಅಂಧಶ್ರದ್ಧೆ ಮತ್ತು ಬಡತನದಂತಹ ನಾನಾ ಸಮಸ್ಯೆಗಳಿಂದ ಬಳಲಿತ್ತು. ಸಾಮಾಜಿಕ, ಆರ್ಥಿಕವಾಗಿ  ತೀವ್ರ ಹಿಂದುಳಿದಿತ್ತು. ಅಂತಹ ಸಮಯದಲ್ಲಿ ಸಂತ ಸೇವಾಲಾಲ್‌ ಮಹಾರಾಜರು ಸಮಾಜದಲ್ಲಿ ಜಾಗೃತಿ ಮೂಡಿಸಿ, ಶಿಸ್ತು, ನೈತಿಕತೆ ಮತ್ತು ಸಮಾನತೆಯ ಸಂದೇಶ ಸಾರಿದರು ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.

- Advertisement -

ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಪ್ರಯುಕ್ತ ಭಾನುವಾರ ಘಮಸುಬಾಯಿ ತಾಂಡಾ ಬೋಂತಿಯ ಗೃಹ ಕಚೇರಿಯಲ್ಲಿ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ʼಸಂತ ಸೇವಾಲಾಲ್ ಮಹಾರಾಜ ಅವರು ದೇಶ ಕಂಡ ಬಹುದೊಡ್ಡ ಸಂತ, ಮಹಾ ತಪಸ್ವಿ, ಬಂಜಾರಾ ಸಮುದಾಯದ ಧರ್ಮಗುರು, ಸಮಾಜ ಸುಧಾರಕರು. ವಿಶೇಷವಾಗಿ ಬಂಜಾರಾ ಸಮಾಜದ ಉನ್ನತಿಗೆ ಹುಟ್ಟಿ ಬಂದ ಅವತಾರ ಪುರುಷರಾಗಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ʼದುಶ್ಚಟಗಳಿಗೆ ಸಿಲುಕಿದ್ದ ಅನೇಕರ ಜೀವನವನ್ನು ಅವರು ಸತ್ಸಂಗ, ಸನ್ಮಾರ್ಗ ಮತ್ತು ಉತ್ತಮ ಮೌಲ್ಯಗಳ ಮೂಲಕ ಪರಿವರ್ತಿಸಿದ್ದರು. ಸಮಾಜದಲ್ಲಿ ನೈತಿಕತೆ, ಸತ್ಯನಿಷ್ಠೆ, ಭಕ್ತಿ ಮತ್ತು ಶ್ರಮದ ಮಹತ್ವವನ್ನು ಸಾರಿದ್ದರು. ಅಂಧಶ್ರದ್ಧೆಗಳನ್ನು ತೊಲಗಿಸಿ, ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ಆತ್ಮಗೌರವದಿಂದ ಬದುಕುವಂತೆ ಕಲಿಸಿಕೊಟ್ಟ ಮಹಾನ್ ಗುರು ಅವರಾಗಿದ್ದರುʼ ಎಂದರು.

ʼಅನ್ಯಾಯ, ಶೋಷಣೆಯ ವಿರುದ್ಧ ಧೈರ್ಯವಾಗಿ ಹೋರಾಡಿ ಬಂಜಾರಾ ಸಮಾಜವನ್ನು ಸಂಘಟಿತಗೊಳಿಸಿದ್ದರು. ಅವರ ತತ್ವಾದರ್ಶಗಳು ಬಂಜಾರಾ ಸಮಾಜದಲ್ಲಿ ಒಗ್ಗಟ್ಟು ಮತ್ತು ಸ್ವಾವಲಂಬನೆಗೆ ದಾರಿದೀಪವಾಗಿವೆ. ಬಂಜಾರಾ ಸಮಾಜದ ಏಳಿಗೆಯಲ್ಲಿ ಸೇವಾಲಾಲ್ ಅವರ ಪಾತ್ರ ಪ್ರಮುಖವಾಗಿದೆ. ನನ್ನ ಊರಿನಲ್ಲಿ ಮಾತಾ ಜಗದಂಬಾ, ಸೇವಾಲಾಲ್ ಮಹಾರಾಜ ಮತ್ತು ಕುಲಗುರು ಡಾ.ರಾಮರಾವ ಮಹಾರಾಜರ ಮಂದಿರಗಳನ್ನು ನಿರ್ಮಿಸಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆʼ ಎಂದರು.

ʼಸೇವಾಲಾಲ್ ಮಹಾರಾಜರ ಜೀವನ ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರ ತ್ಯಾಗ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಇನ್ನಷ್ಟು ಉನ್ನತಿಯಾಗಲು ಸಾಧ್ಯ. ಸೇವಾಲಾಲ್‌ ಅವರ ತತ್ವ ಸಿದ್ಧಾಂತಗಳು ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕಾಗಿದೆʼ ಎಂದು ನುಡಿದರು.

ಇದನ್ನೂ ಓದಿ : ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸಚಿನ ರಾಠೋಡ,  ಸುಭಾಷ ರಾಠೋಡ, ಬಳವಂತ ಪವಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು...

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...