ಔರಾದ್ | ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಶಿವಾನಂದ‌ ಮೊಕ್ತೆದಾರ್, ಪ್ರ.ಕಾರ್ಯದರ್ಶಿಯಾಗಿ ಅನಿಲ ದೇಶಮುಖ ಆಯ್ಕೆ

Date:

ಔರಾದ್ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆಯನ್ನು ನಡೆಸಲಾಗಿದ್ದು, ಫಲಿತಾಂಶವನ್ನು ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಘೋಷಿಸಿದರು. ಅಧ್ಯಕ್ಷರಾಗಿ ಶಿವಾನಂದ ಮೊಕ್ತೆದಾರ್ ಚುನಾವಣೆ ಮೂಲಕ ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ ದೇಶಮುಖ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಮಾತನಾಡಿ, “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸಂಘವು ಸದಾ ಪತ್ರಕರ್ತರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳನ್ನು ನಡೆಸದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೀದರದಲ್ಲಿ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲು ಎಲ್ಲರ ಸಹಕಾರ ಕಾರಣವಾಗಿದೆ. ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗೂಡಿ ಕೆಲಸ ಮಾಡಬೇಕು” ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮಾತನಾಡಿ, “ಸಂಘದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಕರ್ತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸಲು ಸಂಘವು ಸದಾ ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಅವರನ್ನು ಸಂಘದ ಪದಾಧಿಕಾರಿಗಳು ಸತ್ಕರಿಸಿದರು.

ಇದನ್ನೂ ಓದಿ : ಬೀದರ್‌ | ಪ್ರತೀ ಮನೆಯಲ್ಲೂ ಇರಲಿ ಗ್ರಂಥಾಲಯ: ಶೈಲಜಾ ಹುಡುಗೆ

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್, ಕಾರ್ಯದರ್ಶಿಗಳಾದ ಸಂತೋಷ ಚೆಟ್ಟೆ, ಸ್ವಾಮಿದಾಸ್ ನಾಗುರೆ, ಕಾರ್ಯಕಾರಿ ಸದಸ್ಯರಾದ ಶರಣಪ್ಪ ಚಿಟಮೆ, ಶ್ರೀಕಾಂತ ಪಾಟೀಲ ಸೇರಿದಂತೆ ಪತ್ರಕರ್ತರಾದ ಚನ್ನಬಸವ ಮೊಕ್ತೆದಾರ್, ಮಲ್ಲಪ್ಪ ಗೌಡಾ, ಸುನಿಲ್ ಜಿರೋಬೆ, ಮನ್ಮಥ ಸ್ವಾಮಿ, ಸುಧೀರ ಪಾಂಡ್ರೆ, ರವೀಂದ್ರ ಮೊಕ್ತೆದಾರ್, ಅಹ್ಮದ್ ಜಂಬಗಿ, ಲಕ್ಷ್ಮಣ ರಾಠೋಡ್, ರವಿಕುಮಾರ್ ಶಿಂಧೆ, ಅವಿನಾಶ ಪಾಂಡ್ರೆ, ಸೂರ್ಯಕಾಂತ ಎಕಲಾರ, ಶಿವಕುಮಾರ ಸ್ವಾಮಿ, ಅಂಬ್ರೇಶ ಚಿದ್ರೆ, ರಾಜಕುಮಾರ ಚಾಂಬೋಳೆ, ರವಿಕುಮಾರ್ ಮಠಪತಿ, ಅಮರ ಸ್ವಾಮಿ, ಅಂಬಾದಾಸ್ ನಳಗೆ, ಅಮರನಾಥ, ವಿನೋದ ಚಿದ್ರೆ, ಶಿವಕುಮಾರ ಸಾಧುರೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...