ಔರಾದ್‌ | ಸಮಾನತೆ ಪ್ರತಿಪಾದಿಸಿ ಶಿವಯೋಗಿ ಸಿದ್ದರಾಮೇಶ್ವರರು : ಸಿದ್ದಾರೆಡ್ಡಿ

Date:

12ನೇ ಶತಮಾನದ ಪ್ರಮುಖರ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಅವರು ಜಾತಿ, ಲಿಂಗ, ವರ್ಣ ಭೇದ ಸಮಾಜ ಕಟ್ಟುವ ಮೂಲಕ ಸಮಾನತೆ ಸಮಾಜಕ್ಕಾಗಿ ಶ್ರಮಿಸಿದ್ದಾರೆ ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಿದ್ದಾರೆಡ್ಡಿ ಬಿರಾದರ್ ಹೇಳಿದರು.

- Advertisement -

ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ʼಸಿದ್ದರಾಮೇಶ್ವರ ವಚನಗಳಲ್ಲಿ ಮಾನವೀಯ ಮೌಲ್ಯಗಳಿವೆ. ನಾವೆಲ್ಲರೂ ಬಸವಾದಿ ಶರಣರ ಅನುಭಾವದ ವಚನ ಸಾಹಿತ್ಯ ಓದುವುದು ರೂಢಿಸಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಪ್ರಾಚಾರ್ಯ ನವೀಲಕುಮಾರ ಉತ್ಕಾರ ಮಾತನಾಡಿ, ʼಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರು, ಸಾಮಾಜಿಕ ಚಿಂತನೆಯ ಮೌಲ್ಯಗಳ ಪ್ರತಿಪಾದಕರು. ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅನಿಷ್ಟ ಪದ್ಧತಿ, ಮೌಢ್ಯಗಳನ್ನು ನಿಷ್ಠುರವಾಗಿ ವಿರೋಧಿಸಿ ಶಿವಯೋಗಿ ಆದವರುʼ ಎಂದು ಹೇಳಿದರು.

ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಕ್ರಮವಾಗಿ ರೇಣುಕಾ ಅನಿಲಕುಮಾರ, ಗೀತಾ ನರಸಪ್ಪ, ಮತ್ತು ವೈಷ್ಣವಿ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ ಕಿರಣಕುಮಾರ ಬಿರಾದರ್, ಉಪನ್ಯಾಸಕರಾದ ಮಹಾಂತೇಶ ಪಾಂಚಾಳ, ಸುರೇಶ್ ಬಂಡೆ, ರಾಜಕುಮಾರ ಹಳ್ಳಿಕರ್, ಸಂತೋಷ್ ಧೂಳ್ಗೆಂಡೆ, ಸುಧೀರ್ ಅಲೂರೆ, ಪ್ರಿಯಾಂಕಾ ಗೊನ್ನಳಿಕರ್, ಮೀರಾತಾಯಿ ಕಾಂಬಳೆ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು...

ಬೀದರ್‌ | ಬದುಕಿನಲ್ಲಿ ವಾಲ್ಮೀಕಿಯವರ ಜೀವನ ಮೌಲ್ಯ ಅಳವಡಿಸಿಕೊಳ್ಳಿ: ಡಿಸಿ ಶಿಲ್ಪಾ ಶರ್ಮಾ

ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಹಾಗೂ ಜೀವನ ಮೌಲ್ಯಗಳು ಸಾರ್ವಕಾಲಿಕ ಪ್ರಸ್ತುತತೆ ಹೊಂದಿದ್ದು,...

ಬೀದರ್‌ | ಸೋಯಾಬೀನ್‌: ತಗ್ಗಿದ ಇಳುವರಿ, ಧಾರಣೆ ಏರಿಕೆ

ತೀವ್ರ ಮಳೆ ಕೊರತೆಯಿಂದ ಸೋಯಾಬೀನ್‌ ಇಳುವರಿ ಕುಸಿತವಾಗಿದ್ದು, ಮಾರುಕಟ್ಟೆಯಲ್ಲಿ ಆವಕ ಕಡಿಮೆಯಾಗಿದೆ....

ಬೀದರ್‌ | ಜಾತಿರಹಿತ, ಶೋಷಣೆರಹಿತ ಲಿಂಗಾಯತ ಧರ್ಮ : ಎಂ.ಬಿ.ಪಾಟೀಲ್

ವಿಶ್ವಗುರು ಬಸವಣ್ಣನವರ ವಿಚಾರಧಾರೆ, ಶರಣರ ವಚನ ಸಾಹಿತ್ಯ ಹಾಗೂ ಸಮಾನತೆಯ ಆಶಯಗಳಿಗೆ...