ಔರಾದ್‌ | ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ಡಿಸಿ, ಶಾಸಕ ಚವ್ಹಾಣ ಭೇಟಿ

Date:

ಔರಾದ್ ತಾಲೂಕಿನ ಜಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥ ರಾಗಿದ್ದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.

- Advertisement -

ಆಸ್ಪತ್ರೆಯಲ್ಲಿ ದಾಖಲಾದ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು ಬಳಿಕ ಘಟನೆ ನಡೆದ ಜಮಲಾಪುರ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ತಹಸೀಲ್ದಾರ್‌ ಮಹೇಶ ಪಾಟೀಲ್‌, ತಾಲೂಕು ವೈದ್ಯಾಧಿಕಾರಿ ಡಾ.ಗಾಯತ್ರಿ ಸೇರಿದಂತೆ ಮತ್ತಿತರರಿದ್ದರು.

ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದ ಶಾಸಕ ಪ್ರಭು ಚವ್ಹಾಣ

ಔರಾದ ತಾಲೂಕಿನ ಜಮಾಲಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪ್ರಭು ಬಿ.ಚವ್ಹಾಣ ಅವರು ಆಸ್ಪತ್ರೆಗೆ ದೌಡಾಯಿಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರ ಪಡೆದು, ಮಕ್ಕಳಿಗೆ ಅಗತ್ಯವಿರುವ ಎಲ್ಲ ರೀತಿಯ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

1001625321
ಶಾಸಕ ಪ್ರಭು ಚವ್ಹಾಣ ಅವರು ಔರಾದ್‌ ಸರ್ಕಾರಿ ಆಸ್ಪತ್ರೆಗೆ ಭೇಟಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಬಳಿಕ ಮಾತನಾಡಿದ ಅವರು, ʼಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಬೇಧಿಯಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಭೇಟಿ ಮಾಡಿ ಮಾತನಾಡಿಸಿದ್ದೇನೆ‌. ವೈದ್ಯರು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆʼ ಎಂದರು.

ಇದನ್ನೂ ಓದಿ : ಔರಾದ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಔರಾದ(ಬಿ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ. ಕಾಲ ಕಾಲಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿಲ್ಲ. ಹಾಗಾಗಿ ಅಧಿಕಾರಿಗಳ ಮೇಲೆ ನಿಯಂತ್ರಣ ಕಾಣಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ವೈಫಲ್ಯವೂ ಇದರಲ್ಲಿ ಎದ್ದು ಕಾಣಿಸುತ್ತಿದೆʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...