ಔರಾದ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Date:

ಔರಾದ್‌ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ.

- Advertisement -

ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಔರಾದ್‌ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಈ ಬಗ್ಗೆ ಔರಾದ್‌ ಬಿಇಒ ಬಿ.ಜೆ.ರಂಗೇಶ ಅವರು ʼಈದಿನʼ ಜೊತೆ ಮಾತನಾಡಿ, ʼಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು ದಾಖಲಾತಿ 94 ಇದೆ. ಇಂದು 64 ಜನ ವಿದ್ಯಾರ್ಥಿಗಳು ಹಾಜರಿದ್ದರು. ಅವರಲ್ಲಿ 2-3 ಮಕ್ಕಳಿಗೆ ತಲೆ ನೋವು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೊಂದಿಗೆ ಉಳಿದ 50ಕ್ಕೂ ಅಧಿಕ ಮಕ್ಕಳನ್ನು ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಎಲ್ಲರೂ ಆರೋಗ್ಯವಾಗಿದ್ದಾರೆʼ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ದೂರು :

ಬಿಸಿಯೂಟ ಸೇವಿಸಿದ 80 ಮಕ್ಕಳು ಅಸ್ವಸ್ಥಗೊಂಡ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿದೆ.

ʼಆಯೋಗವು ಈ ಹಿಂದೆಯೂ ತಮ್ಮ ಕಛೇರಿಗೆ ಬಿಸಿ ಊಟದ ಅವ್ಯವಸ್ಥೆಯಲ್ಲಿ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿರುವುದು ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಲ್ಲದೆ ಕೆಲವು ಮಕ್ಕಳು ತೀವ್ರ ರೀತಿಯ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿರುವುದು ದಿನ ಪತ್ರಿಕೆಗಳಲ್ಲಿ ವರದಿಯಾಗಿದ್ದರಿಂದ ತಮ್ಮ ಗಮನಕ್ಕೆ ತಂದು ಈ ಬಗ್ಗೆ ಕ್ರಮವಹಿಸುವಂತೆ ಕೋರಲಾಗಿತ್ತು. ಮುಂದುವರೆದು ಬಿಸಿ ಊಟದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳಿಂದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುತ್ತಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವ ಬಗ್ಗೆಯೂ ಪದೇ ಪದೇ ವರದಿಯಾಗುತ್ತಿದ್ದು ಆಯೋಗವು ಬಿಸಿ ಊಟದ ತೊಂದರೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿರುತ್ತದೆʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

ʼಈ ಪತ್ರ ತಲುಪಿದ ಕೂಡಲೇ ಸಂಬಂಧಪಟ್ಟ ಎಲ್ಲಾ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಸಿಯೂಟದಲ್ಲಿ ಉಂಟಾಗುವ ತೊಂದರೆಯಿಂದ ಮಕ್ಕಳನ್ನು ರಕ್ಷಿಸುವಲ್ಲಿ ಸೂಕ್ತ ಕ್ರಮವಹಿಸುವಂತೆ ಸೂಚಿಸುವುದು ಹಾಗೂ ಇತರೆ ಅಗತ್ಯ ಕ್ರಮಗಳನ್ನು ವಹಿಸುವಂತೆ ಆಯೋಗವು ಮತ್ತೊಮ್ಮೆ ತಮ್ಮನ್ನು ಕೋರುತ್ತಾ ಇಲಾಖೆಯು ವಹಿಸಿದ ಕ್ರಮದ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ 5 ದಿನದ ಒಳಗಾಗಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಧ್ಯಾಹ್ನ ಉಪಹಾರ ಯೋಜನೆಯ ಜಂಟಿ ನಿರ್ದೇಶಕರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...