ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

Date:

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಯುವ ಮುಖಂಡ ಮಂಜು ಸ್ವಾಮಿ ಹೇಳಿದರು.

- Advertisement -

ತಾಲ್ಲೂಕಿನ ಸಂತಪುರದ ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕರ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಬೇಕು. ಶಾಲೆ ಮತ್ತು ಪಾಲಕರ ನಡುವೆ ಉತ್ತಮ ಬಾಂಧವ್ಯ ಹಾಗೂ ಸಹಕಾರವಿದ್ದಾಗ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಮನೋಹರ ಬಿರಾದಾರ ಮಾತನಾಡಿ, “ಶಾಲಾಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಪಾಲಕರು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು. ಪ್ರತಿದಿನ ಮಕ್ಕಳ ಕಲಿಕಾ ಪ್ರಗತಿಯನ್ನು ಗಮನಿಸುವುದರ ಜತೆಗೆ ಶಿಕ್ಷಕರೊಂದಿಗೆ ಸಂಪರ್ಕದಲ್ಲಿರಬೇಕು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಉತ್ತಮ ನಡವಳಿಕೆ ಹಾಗೂ ಕಲಿಕೆಯ ಆಸಕ್ತಿ ಬೆಳೆಸಲು ಶಾಲೆ ಮತ್ತು ಪಾಲಕರು ಒಟ್ಟಾಗಿ ಶ್ರಮಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಳೆ ಮಾತನಾಡಿ, “ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ವೇದಿಕೆ ಕಲ್ಪಿಸಿದಾಗ ಮಕ್ಕಳು ಉನ್ನತ ಸ್ಥಾನಕ್ಕೇರಲು ಸಾಧ್ಯ. ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಉಪನ್ಯಾಸಕ ಡಾ.ದತ್ತಾತ್ರಿ ಮಡಿವಾಳ್, ಕನ್ನಡ ಶಿಕ್ಷಕಿ ಸಂಗೀತಾ ಹೊಸಖಂಡೆ, ವೃತ್ತಿಪರ ಶಿಕ್ಷಣ ಶಿಕ್ಷಕಿ ಶಶಿಕಲಾ ಜಾರ್ಜ್, ವಿಜ್ಞಾನ ಶಿಕ್ಷಕ ಈಶ್ವರ ಪವಾರ, ಎಸ್‌ಡಿಎ ಲಕ್ಷ್ಮಿ ಕಾರ್ಕಳೆ, ಹಿಂದಿ ಶಿಕ್ಷಕಿ ರೇಣುಕಾ ಗಾಯಕ್ವಾಡ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಶಿಕ್ಷಕ ರಾಜಶೇಖರ ಕುಶನೂರೆ ಸೇರಿದಂತೆ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

WhatsApp Image 2026 11 13 at 8.18.17 PM 10
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ರೈತರನ್ನು ಸಬಲರನ್ನಾಗಿಸಿದಾಗ ತೋಟಗಾರಿಕೆ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕ;ಆರ್. ಗಿರೀಶ್

ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ ಸ್ಥಿತಿ-ಗತಿ ಏನು?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ...

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...