ಔರಾದ್‌ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

Date:

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ-ಔರಾದ್‌ ರಾಷ್ಟ್ರೀಯ ಹೆದ್ದಾರಿ-161(ಎ)ರಲ್ಲಿ ಔರಾದ್‌ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.

- Advertisement -

ಮೃತರು ಔರಾದ್‌ ತಾಲೂಕಿನ ವಡಗಾಂವ(ದೇ) ಗ್ರಾಮದ ಮಹಾದೇವ ಖಳೂರೆ (50) ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಮಹಾದೇವ ಅವರು ಔರಾದ್‌ ಪಟ್ಟಣದ ಖಾಸಗಿ ಸಹಕಾರ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗ್ರಾಮದಿಂದ ಬ್ಯಾಂಕ್‌ಗೆ ತೆರಳುವ ವೇಳೆ ಎದುರಿನಿಂದ ಬೈಕ್‌ ಮಧ್ಯ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಮೇಲೆ ಅಪ್ಪಳಿಸಿ ಬಿದ್ದಿದ್ದಾರೆ. ತಲೆಗೆ ಗಂಭೀರವಾಗಿ ಪೆಟ್ಟಾದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸಂತಪೂರ ಕಡೆಯಿಂದ ಔರಾದ್‌ಗೆ ಬರುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ದುರ್ಘಟನೆಯಲ್ಲಿ ಓರ್ವ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಜಹೀರಾಬಾದ್ ಮೂಲದ‌ ಇನ್ನೋರ್ವ ಬೈಕ್‌ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ. ಮೃತ ವ್ಯಕ್ತಿ ಹೆಲ್ಮೆಟ್‌ ಧರಿಸಿದ್ದರೆ ತಲೆಗೆ ಗಂಭೀರವಾಗಿ ಪೆಟ್ಟಾಗುವುದು ತಪ್ಪಿಸಿಕೊಳ್ಳಬಹುದಿತ್ತು ಎಂದು ಪೊಲೀಸರು ಊಹಿಸಿದ್ದಾರೆ.

ಔರಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | 43 ಗ್ರಾಮಗಳಲ್ಲಿ ನೀರಿನ ಅಭಾವ : ನೀರು ಸರಬರಾಜಿಗೆ ಅಡ್ಡಿಪಡಿಸಿದರೆ ನಿರ್ದಾಕ್ಷಿಣ್ಯ ಕ್ರಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...