ಔರಾದ್‌ | ಯುವಜನರಿಗೆ ಆರ್ಥಿಕ ನೆರವು ಒದಗಿಸುವ ಯೋಜನೆ ʼಯುವ ನಿಧಿʼ

Date:

ಔರಾದ್ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಶನಿವಾರ ಯುವ ನಿಧಿ ಜಾಗೃತಿ ಕಾರ್ಯಕ್ರಮ ನಡೆಯಿತು.

- Advertisement -

ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು ಮಾತನಾಡಿ, “ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯು ವಿದ್ಯಾಭ್ಯಾಸ ಪೂರ್ಣಗೊಳಿಸಿದ ಯುವಜನರಿಗೆ ಆರ್ಥಿಕ ನೆರವು ನೀಡುವ ಮಹತ್ವದ ಯೋಜನೆಯಾಗಿದೆ. ಅರ್ಹ ಯುವಕರು ಯೋಜನೆಯ ಸೌಲಭ್ಯವನ್ನು ಪಡೆದು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತಾಲೂಕು ಪಂಚಾಯತ್ ಇಒ ಕಿರಣ ಪಾಟೀಲ್ ಮಾತನಾಡಿ, “ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕೆ ನೆರವಾಗುವ ಉದ್ದೇಶದಿಂದ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಿಂದ ಯುವಕರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಉದ್ಯೋಗದ ಹುಡುಕಾಟದ ಅವಧಿಯಲ್ಲಿ ಆರ್ಥಿಕ ನೆರವು ದೊರೆಯುವುದರಿಂದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿ, ಉತ್ತಮ ಅವಕಾಶಗಳನ್ನು ಬಳಸಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯ ಅಧಿಕಾರಿ ಲೋಕೇಶ್ ಮಾನ್ಸಿಂಗ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ.ಪ್ರಭಾಕರ್ ಅವರು, ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ಉದ್ದೇಶ, ಅರ್ಹತಾ ಮಾನದಂಡಗಳು, ನೋಂದಣಿ ಪ್ರಕ್ರಿಯೆ, ಯೋಜನೆಯ ಪ್ರಯೋಜನಗಳು ಹಾಗೂ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ : ನಮ್ಮ ಕರ್ನಾಟಕ ಸೇನೆ

ಪಂಚ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಬಾಳಾಸಾಹೇಬ್ ಪಾಟೀಲ್, ಸದಸ್ಯರಾದ ಶಿವಕುಮಾರ ಪಾಟೀಲ್, ಡಿ.ಕೆ.ಚಂದು, ಸಲ್ಲಾವುದ್ದಿನ್ ಜಂಬಗಿ, ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...