ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

Date:

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆಯಾಗಿದ್ದಾರೆ.

- Advertisement -

ಔರಾದ್ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಅ. 24ರಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ರಾಜಶೇಖರ ನಾಗಮೂರ್ತಿ ಅವರು ಅನಿರುದ್ಧ ವಾಡೇಕರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

‌ಕಮಲನಗರ ತಾಲೂಕಿನ ಬೆಳಕೋಣಿ (ಭೋ) ಗ್ರಾಮದವರಾದ ಅನಿರುದ್ಧ ವಾಡೇಕರ್‌ ವಕೀಲರಾಗಿದ್ದು, ಈ ಹಿಂದೆ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಘಟನೆಯಲ್ಲಿ ಅನುಭವ ಹೊಂದಿದ್ದಾರೆ.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಪ್ರಭು ಬಿ. ಚವ್ಹಾಣ ಮಾತನಾಡಿ, “ಮಂಡಲ ಅಧ್ಯಕ್ಷ ಸ್ಥಾನವು ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಪಕ್ಷವನ್ನು ಬಲಪಡಿಸುವುದರ ಜತೆಗೆ, ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ಪಕ್ಷದ ಜವಾಬ್ದಾರಿ ಕೇವಲ ಸಂಘಟನೆಯ ಕೆಲಸವೆಂದು ಪರಿಗಣಿಸದೆ, ದೇಶ ಸೇವೆಯ ಅವಕಾಶವೆಂದು ಭಾವಿಸಬೇಕು. ಸಂಘಟನೆಗೆ ಹೆಚ್ಚಿನ ಸಮಯ ಮೀಸಲಿಟ್ಟು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಳಮಟ್ಟದಿಂದ ಪಕ್ಷ ಬಲಪಡಿಸಲು ಶ್ರಮಿಸಬೇಕು” ಎಂದು ಕರೆ ನೀಡಿದರು.

WhatsApp Image 2026 10 10 at 7.46.08 PM 22
ಜಾಹೀರಾತು

ನಿಕಟಪೂರ್ವ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಅವರು ಪಕ್ಷದ ಸಂಘಟನೆಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಸೇವೆ ಸ್ಮರಣೀಯವಾಗಿದ್ದು, ನೂತನ ಅಧ್ಯಕ್ಷರು ಅವರ ಸಹಕಾರದೊಂದಿಗೆ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿರಣ ಪಾಟೀಲ ಹಾಗೂ ಪೀರಪ್ಪ ಔರಾದೆ ಅವರು ಪಕ್ಷದ ಸಿದ್ಧಾಂತ ಮತ್ತು ಮಂಡಲ ಅಧ್ಯಕ್ಷರ ಜವಾಬ್ದಾರಿಗಳ ಕುರಿತು ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಅವರು ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರ ಪಾತ್ರ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಿದರು.

WhatsApp Image 2026 10 10 at 6.59.09 PM 7
ಜಾಹೀರಾತು

ಬಿಜೆಪಿ ಮುಖಂಡರಾದ ಸುಭಾಷ ಬಿರಾದಾರ, ಚಂದ್ರಶೇಖರ ಪಾಟೀಲ, ಶಿವರಾಜ ಅಲ್ಮಾಜೆ, ರಾಜಕುಮಾರ ಪಾಟೀಲ, ನಿಲೇಶ ರಕ್ಣ್ಯಾಳೆ, ವಸಂತ ಬಿರಾದಾರ, ಬಸವರಾಜ ಪಾಟೀಲ, ಸತೀಶ ಬಿರಾದಾರ, ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ವಿವಿಧ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...

ವಿಮಾನ ಇಂಧನ ತೆರಿಗೆ ಇಳಿಸಿದ ತಮಿಳುನಾಡು ಸಿಎಂ ವಿಜಯ್‌

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಿಮಾನಯಾನ ಸಂಸ್ಥೆಗಳಿಗೆ...

ಪಂಜಾಬ್‌ ಹೊಗೆ ಹರಿಯಾಣ ಬಿಟ್ಟು ನೇರವಾಗಿ ದೆಹಲಿಗೆ ಬರಲು ಪೈಪ್‌ಲೈನ್ ಇದೆಯೇ? BJPಗೆ AAP ಲೇವಡಿ

ಪಂಜಾಬ್‌ನಲ್ಲಿ ಭತ್ತದ ಹುಲ್ಲನ್ನು ಸುಡಲಾಗುತ್ತಿದೆ. ಅದರ ಹೊಗೆ ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ...

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...