ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ

Date:

ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಔರಾದ್ ಶಾಸಕ ಪ್ರಭು ಬಿ.ಚವ್ಹಾಣ ಎಚ್ಚರಿಕೆ ನೀಡಿದರು.

- Advertisement -

ಔರಾದ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನ.2ರಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

“ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿರುವುದರಿಂದ ಬರ ಪರಿಸ್ಥಿತಿ ಎದುರಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ನೀರಿನ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಅಥವಾ ಪರ್ಯಾಯ ವ್ಯವಸ್ಥೆಯ ಮೂಲಕ ನೀರು ಪೂರೈಸಬೇಕು” ಎಂದು ಸೂಚಿಸಿದರು.

“ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಪರಿಸ್ಥಿತಿ ಪರಿಶೀಲಿಸಬೇಕು. ಮೊಬೈಲ್ ಫೋನ್‌ಗಳನ್ನು ಸದಾ ಚಾಲ್ತಿಯಲ್ಲಿಟ್ಟುಕೊಂಡು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಬೇಕು. ಮೊಬೈಲ್ ಸ್ವಿಚ್ ಆಫ್ ಮಾಡುವುದು, ಸಾರ್ವಜನಿಕರೊಂದಿಗೆ ಅಗೌರವದಿಂದ ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ನೀರಿನ ಮೂಲಗಳ ಕೊರತೆ ಇರುವ ಹಾಗೂ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಲಭ್ಯವಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮೋಟಾರ್ ಕೆಟ್ಟಿದೆ, ವಾಟರ್‌ಮನ್ ಕೆಲಸ ಮಾಡುತ್ತಿಲ್ಲ, ವಿದ್ಯುತ್ ತಂತಿ ಹಾಳಾಗಿದೆ ಎಂಬ ಸಣ್ಣಪುಟ್ಟ ಕಾರಣಗಳನ್ನು ನೀಡಿ ನೀರು ಪೂರೈಕೆ ಸ್ಥಗಿತಗೊಳಿಸುವುದನ್ನು ಸಹಿಸುವುದಿಲ್ಲ. ಇಂತಹ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

WhatsApp Image 2026 10 10 at 7.46.08 PM 31

ಸಭೆಯಲ್ಲಿ ಗ್ರಾಮ ಪಂಚಾಯಿತಿವಾರು ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಔರಾದ್ ತಹಶೀಲ್ದಾರ ಮಹೇಶ ಪಾಟೀಲ, ಕಮಲನಗರ ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಸಹಾಯವಾಣಿ ಆರಂಭ

ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಶಾಸಕರ ಕಚೇರಿಯಲ್ಲಿ ಆರಂಭಿಸಿರುವ ಸಹಾಯವಾಣಿ ( 9108708774 / 7090157920) ಕೇಂದ್ರಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು.

ಇದನ್ನೂ ಓದಿ : ಬೀದರ್‌ | ಅರಣ್ಯ ಭವನ, ಟ್ರೀ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

WhatsApp Image 2026 10 10 at 6.59.09 PM 12
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಾಲಿನ ದರ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ರಾಜ್ಯ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ರಿಂದ ₹12ರವರೆಗೆ...

SIR ಅಂತಿಮ ಮತದಾರರ ಪಟ್ಟಿ ತಿರಸ್ಕರಿಸಿ; ರಾಜ್ಯ ಸರ್ಕಾರಕ್ಕೆ ನಾಗರಿಕ ಸಂಘಟನೆಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿರುವ ಎಸ್‌ಐಆರ್‌ನ ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ ಜನಾಂದೋಲನವಾಗಬೇಕು…

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು...

ಕೊಪ್ಪಳ | ರಸ್ತೆ ಅಪಘಾತ: ತಂದೆ, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು

ಕೊಪ್ಪಳ ತಾಲ್ಲೂಕಿನ ಗಿಣಿಗೇರಾ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ...