ಔರಾದ್‌ | ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ : ನಂದದೀಪ ಬೊರಾಳೆ

Date:

ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ. ಸಾಮಾನ್ಯ ಶಿಕ್ಷಣಕ್ಕಿಂತ ಕಲಾ ಶಿಕ್ಷಣ ವಿಭಿನ್ನವಾಗಿದ್ದು, ನಮ್ಮ ಚರಿತ್ರೆಯ ಚಿತ್ರಣವನ್ನು ಆಕೃತಿಯ ರೂಪದಲ್ಲಿ ತೆರೆದಿಡುವ ಅದ್ಭುತ ಕಲಾ ಪ್ರಕಾರ ಚಿತ್ರಕಲೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸಂಸ್ಥೆ ಕಾರ್ಯದರ್ಶಿ ನಂದಾದೀಪ ಬೋರಾಳೆ ಹೇಳಿದರು.

- Advertisement -

ಔರಾದ್ ತಾಲೂಕಿನ ಸಂತಪುರ ಗ್ರಾಮದ ಸುಭಾಷಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದಲ್ಲಿ ಕಲಾವಿದ ಪ್ರಭು ಎಸ್.ವಾಸುದೇವ ಅವರು ಆಯೋಜಿಸಿದ್ದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

“ಕಲೆಯನ್ನು ಕರಗತ ಮಾಡಿಕೊಂಡು, ತನ್ನ ಚಿತ್ರಕಲೆಯ ಮೂಲಕ ಅದರಲ್ಲಿನ ಭಾವನೆಗಳನ್ನು ಸಮಾಜಕ್ಕೆ ಧಾರೆ ಎರೆಯುವವನೇ ನಿಜವಾದ ಕಲಾವಿದನಾಗಿ ಹೊರಹೊಮ್ಮುತ್ತಾನೆ. ಗ್ರಾಮೀಣ ಭಾಗದ ಬಡ ಕುಟುಂಬದಲ್ಲಿ ಬೆಳೆದು ಬಂದಿರುವ ಯುವ ಕಲಾವಿದ ಪ್ರಭು ಅವರು ತಮ್ಮ ಸ್ವಂತ ಕೈಚಳಕದಿಂದ ಸಾವಿರಾರು ಕಲಾಕೃತಿಗಳನ್ನು ರಚಿಸುವ ಮೂಲಕ ಪ್ರತಿಭಾವಂತ ಕಲಾವಿದರಾಗಿ ಹೊರಹೊಮ್ಮಿದ್ದಾರೆ. ತಮ್ಮ ಕಲಾ ಪ್ರತಿಭೆಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ” ಎಂದರು.

“ಕಲೆ ಹಾಗೂ ಕಲಾವಿದರನ್ನು ಉಳಿಸಿ ಬೆಳೆಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿಭಾವಂತ ಕಲಾವಿದರಿಗೆ ಪ್ರೋತ್ಸಾಹ ಮತ್ತು ಸೂಕ್ತ ವೇದಿಕೆ ದೊರೆತಾಗ ಅವರ ಪ್ರತಿಭೆ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದ ಇಂತಹ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಮುಖ್ಯಗುರು ಮನೋಹರ ಬಿರಾದರ್ ಮಾತನಾಡಿ, “ಕಲಾವಿದ ಪ್ರಭು ಎಸ್.ವಾಸುದೇವ ಅವರ ಕಲಾಕೃತಿಗಳಲ್ಲಿ ತಂತ್ರಗಾರಿಕೆಗೆ ವಿಶೇಷ ಮಹತ್ವ ನೀಡಲಾಗಿದೆ. ವಿವಿಧ ವಿಷಯಗಳನ್ನು ಕಲೆಯ ಮೂಲಕ ಪರಿಣಾಮಕಾರಿಯಾಗಿ ಅಭಿವ್ಯಕ್ತಿಪಡಿಸಿರುವ ಅವರ ಚಿತ್ರಗಳು ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸುವುದರ ಜೊತೆಗೆ, ವಿದ್ಯಾರ್ಥಿಗಳಿಗೆ ಹಲವು ಉಪಯುಕ್ತ ಮಾಹಿತಿಯನ್ನು ಒದಗಿಸಿವೆ” ಎಂದು ಹೇಳಿದರು.

ಇದನ್ನೂ ಓದಿ : ಹುಮನಾಬಾದ್ | ನದಿಗೆ ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

ಕಾರ್ಯಕ್ರಮದಲ್ಲಿ ಮುಖಂಡರಾದ ಗಣಪತಿ ವಾಸುದೇವ, ಸತೀಶ ನಾಗೂರೆ, ಶಿಕ್ಷಕರಾದ ಸಂಗೀತಾ ಹೊಸಖಂಡೆ, ರಾಜಶೇಖರ ಕುಶನೂರೆ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ...

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...