ಔರಾದ್‌ | ಮಕ್ಕಳು ದೇಶದ ನಿಜವಾದ ಸಂಪತ್ತು: ಮನೋಹರ ಬಿರಾದರ

Date:

ದೇಶದ ಉಳಿವು ಮತ್ತು ಪ್ರಗತಿಯಲ್ಲಿ ಮಾನವ ಸಂಪನ್ಮೂಲ ಪ್ರಮುಖ ಪಾತ್ರ ವಹಿಸಲಿದ್ದು, ಮಕ್ಕಳು ದೇಶದ ನಿಜವಾದ ಸಂಪತ್ತಾಗಿದ್ದಾರೆ ಎಂದು ಸಂತಪೂರ ಸುಭಾಷ ಚಂದ್ರಬೋಸ್ ಪ್ರೌಢಶಾಲೆಯ ಮುಖ್ಯಗುರು ಮನೋಹರ ಬಿರಾದರ ಹೇಳಿದರು.

- Advertisement -

ಔರಾದ್‌ ತಾಲ್ಲೂಕಿನ ಸಂತಪೂರದ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

“ಮಕ್ಕಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆಯುವುದರ ಜೊತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಕಾಪಾಡಿಕೊಂಡು ಬದುಕಲು ಕಲಿಯಬೇಕು. ಶಿಕ್ಷಕರು ಹಾಗೂ ಪಾಲಕರನ್ನು ಗೌರವದಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಮಲನಗರ ತಾಪಂ ಮಾಜಿ ಅಧ್ಯಕ್ಷ ಗಿರೀಶ ಒಡೆಯರ ಅವರು 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ವೈಷ್ಣವಿ ಸಿದ್ದಪ್ಪ ಅವರಿಗೆ ₹5,000 ಸಹಾಯಧನ ನೀಡಿ ಗೌರವಿಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ ಪ್ರತಿವರ್ಷ ₹5,000 ಬಹುಮಾನ ನೀಡುವುದಾಗಿ ಘೋಷಿಸಿದರು.

WhatsApp Image 2026 11 20 at 5.08.16 PM

ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಹಾಗೂ ಶಿಕ್ಷಕ ಮಾರುತಿ ಗಾದಿಗೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ‌ ಅನುಭವ ಮಂಟಪ ಪಬ್ಲಿಕ್‌ ಶಾಲೆ ಪ್ರಾಂಶುಪಾಲೆ ಗುರುಪ್ರೀತ್ ಕೌರ್, ಮುಖ್ಯಗುರು ದ್ರಾಕ್ಷಿಣಿ ಸ್ವಾಮಿ, ಉಪನ್ಯಾಸಕರಾದ ಶಿಲಾಧರ್ ಕುಚ್ಚಬಾಳ, ಚಂದರಾರೆಡ್ಡಿ, ರಾಜಕುಮಾರ ಹಳ್ಳಿಕರ, ಸುದೀರ್ ಆಲೂರೆ, ಶಿವಪುತ್ರ ಧರಣಿ, ಸುಧಾ ಕೌಟಿಗೆ, ಪ್ರಿಯಾಂಕಾ ಗೊನ್ನಳ್ಳಿಕರ್, ಮಹಾಂತೇಶ ಪಾಂಚಾಳ, ವನದೇವಿ ಎಕ್ಕಳೆ, ಮೀರಾತಾಯಿ ಕಾಂಬಳೆ, ಅಶ್ವಿನಿ ಹಿಂದೊಡ್ಡಿ ಹಾಗೂ ಸಂತೋಷ ದೊಳಗಂಡೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ‘ಬಸವ ಮಂಟಪ’ ಕೃತಿ ಮುಟ್ಟುಗೋಲು ನಿರ್ಧಾರ ಸ್ವಾಗತ

WhatsApp Image 2026 11 13 at 8.18.17 PM 8
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಪಟ್ಟದಕಲ್ಲಿನಲ್ಲಿ ಎರಡು ದಿನಗಳ ‘ಕಲಾಧಾರ’ ಸಂಗೀತೋತ್ಸವ

ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಐತಿಹಾಸಿಕ ಪಟ್ಟದಕಲ್ಲಿನಲ್ಲಿ ಇಂದು ಮತ್ತು ನಾಳೆ...

ಬಾಗಲಕೋಟೆ |ಗ್ರಾಮೀಣ ಆಸ್ತಿ ಮಾಲೀಕರಿಗೆ ಭೂ ಗ್ಯಾರಂಟಿ ಅಭಿಯಾನ: ನ. 2ರಿಂದ ಜಾರಿ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ದಾಖಲೆ ಒದಗಿಸಿ ಆಸ್ತಿ ಹಕ್ಕುಗಳನ್ನು...

ಬಾಗಲಕೋಟೆ |ಕಲ್ಲಿನಿಂದ ದಂಪತಿಗಳ ಮೇಲೆ ಹಲ್ಲೆ; ಆರೋಪಿಗೆ 2 ವರ್ಷ ಜೈಲು, ₹25 ಸಾವಿರ ದಂಡ

ಪತಿ-ಪತ್ನಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ...

ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ...