ಔರಾದ್‌ | ಕಲುಷಿತ ನೀರು ಪೂರೈಕೆ ಆರೋಪ : ಬೆಳಕುಣಿ(ಚೌ) ಗ್ರಾಮಕ್ಕೆ ಸಿಇಒ ಭೇಟಿ, ಪರಿಶೀಲನೆ

Date:

ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಬುಧವಾರ ಬೆಳಿಗ್ಗೆ ಬೆಳಕುಣಿ(ಚೌ) ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಗ್ರಾಮದ ಹೊರವಲಯದ ನೀರು ಶುದ್ಧಿಕರಣ ಘಟಕಕ್ಕೆ ಸಿಇಒ ಗಿರೀಶ ಬದೋಲೆ, ಔರಾದ್‌ ತಾಲೂಕು ಪಂಚಾಯತ್‌ ಇಒ ಕಿರಣ ಪಾಟೀಲ್‌, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

“ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಗ್ರಾಮ ಪಂಚಾಯತ್‌ ಅಧಿಕಾರಿಗಳು ದಲಿತರ ಓಣಿಯಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ” ಎಂದು ಗ್ರಾಮದ ನಿವಾಸಿ ಅರವಿಂದ ಮಲ್ಲಿಗೆ ಆರೋಪಿಸಿದ್ದರು.

ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಲುಷಿತ ನೀರು ಪೂರೈಕೆ ವಿಚಾರವಾಗಿ ಗ್ರಾಮ ಪಂಚಾಯತ್‌ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗದುಕೊಂಡ ಅವರು ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ನಿರಂತರವಾಗಿ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಕಮಲನಗರ | ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ಸಾವು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆತ್ಮರಾಮ್, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ʼಈ ಬಗ್ಗೆ ಈದಿನ.ಕಾಮ್‌ ನಲ್ಲಿ ಮಂಗಳವಾರ ʼಬೆಳಕುಣಿ ಗ್ರಾಮದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ: ಕ್ರಮಕ್ಕೆ ಆಗ್ರಹʼ ಎಂಬ ತಲೆಬರಹದಡಿ ಸುದ್ದಿ ಪ್ರಕಟಿಸಿ ಗಮನ ಸೆಳೆದಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...