ಸಾಲದ ಹೊರೆಯಿಂದ ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಬೋರ್ಗಿ (ಜೆ) ಗ್ರಾಮದ ಶಾಮರಾವ ಮಾಣಿಕರಾವ ಮೇತ್ರೆ (54) ಎಂದು ಗುರುತಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಮಳೆ ಅಭಾವದಿಂದ ಬರದ ಛಾಯೆ ಆವರಿಸಿದ್ದು, ಬೆಳೆ ಒಣಗುತ್ತಿದೆ. ಮೃತ ರೈತ ಮೇತ್ರೆ ಅವರು ಕೃಷಿ ಚಟುವಟಿಕೆಗಳಿಗಾಗಿ ಪಿಕೆಪಿಎಸ್ ಬ್ಯಾಂಕ್ ಹಾಗೂ ಖಾಸಗಿಯವರ ಬಳಿ ₹4 ರಿಂದ ₹5 ಲಕ್ಷ ಸಾಲ ಪಡೆದಿದ್ದರು. ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟದಿಂದ ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ




