ಸಾಲಬಾಧೆ ತಾಳಲಾರದೆ ರೈತರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಸುಧಾಕರ ಮಾಣಿಕ ಮಾಳಗೆ (50) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರಿಗೆ ನಾಲ್ವರು ಹೆಣ್ಣು, ಒಬ್ಬ ಪುತ್ರನಿದ್ದಾರೆ. ಮೃತರಿಗೆ ಸ್ವಂತ ಎರಡು ಎಕರೆ ಜಮೀನಿತ್ತು. ಕೃಷಿಗಾಗಿ ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ನೆರೆ-ಬರದಿಂದ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕಮಲನಗರ ತಾಲೂಕಿನ ಠಾಣಾ ಕುಶನೂರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೀದರ್ | ಸೋಯಾಬೀನ್: ತಗ್ಗಿದ ಇಳುವರಿ, ಧಾರಣೆ ಏರಿಕೆ





