ಔರಾದ್‌ | ಕೆಟ್ಟು ನಿಂತು ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಆಗ್ರಹ

Date:

ಔರಾದ್(ಬಿ) ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೌಠಾ(ಬಿ), ಕೌಡಗಾಂವ ಹಾಗೂ ಗಡಿಕುಶನೂರ ಗ್ರಾಮಗಳಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ವರ್ಷಗಳಿಂದ ಕಾರ್ಯನಿರ್ವಹಿಸದೆ ಬಾಗಿಲು ಮುಚ್ಚಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ತಾಲೂಕಾಧ್ಯಕ್ಷ ಗೌತಮ್ ಮೇತ್ರೆ ಆಗ್ರಹಿಸಿದ್ದಾರೆ.

- Advertisement -

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕೆಂಬ ಮಹತ್ವಕಾಂಕ್ಷಿ ಉದ್ದೇಶದಿಂದ ಸರ್ಕಾರ ಗ್ರಾಮಗಳಲ್ಲಿ ಲಕ್ಷಾಂತರ ವೆಚ್ಚದಿಂದ ಕುಡಿಯುವ ನೀರಿನ ಘಟಕಗಳು ಸ್ಥಾಪಿಸಿದೆ. ಆದರೆ, ಸೂಕ್ತ ನಿರ್ವಹಣೆಯ ಕೊರತೆಯಿಂದ ಬಾಗಿಲು ಮುಚ್ಚಿವೆ. ಸರ್ಕಾರದಿಂದ ಅನುದಾನ ಬರುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ನೀರಿನ ಘಟಕಗಳು ಜನರ ಸೇವೆಗೆ ಅಣಿಯಾಗಿಲ್ಲ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
WhatsApp Image 2026 05 10 at 7.34.59 AM 1

ಕೌಠಾ(ಬಿ) ಗ್ರಾಮದಲ್ಲಿ ಸುಮಾರು 3,500, ಗಡಿಕುಸುನೂರ 3,000 ಹಾಗೂ ಕೌಡಗಾಂವ ಗ್ರಾಮದಲ್ಲಿ 2,500ಕ್ಕೂ ಅಧಿಕ ಜನಸಂಖ್ಯೆ ಇದೆ. ಈ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ ಕೆಲವೇ ತಿಂಗಳಲ್ಲಿ ಬಾಗಿಲು ಮುಚ್ಚಲ್ಪಟ್ಟಿದ್ದು, ಇದುವರೆಗೆ ಅವು ಕಾರ್ಯನಿರ್ವಹಿಸದಿರುವ ಬಗ್ಗೆ ಕಾರಣ ತಿಳಿದುಬಂದಿಲ್ಲ. ಇದರಿಂದಾಗಿ ಜನರಿಗೆ ಶುದ್ಧ ನೀರು ಎಂಬುದು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಸಾರ್ವಜನಿಕ ಗ್ರಂಥಾಲಯಗಳು!

ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ, ಕೆಟ್ಟು ನಿಂತ ನೀರಿನ ಘಟಕಗಳನ್ನು ರಿಪೇರಿ ಮಾಡಿ ಪುನಾರಂಭಿಸಬೇಕು. ಮಳೆಗಾಲ ಆರಂಭವಾಗುವ ಮುನ್ನವೇ ಮೂರು ಗ್ರಾಮಗಳ ಜನರ ಆರೋಗ್ಯದ ಹಿತದೃಷ್ಟಿಯಿಂದ ಇದು ಅಗತ್ಯವಾಗಿದೆ. ಸರ್ಕಾರದ ಆಶಯದಂತೆ ಜನರಿಗೆ ಶುದ್ಧ ನೀರು ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಗೌತಮ್ ಮೇತ್ರೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...