ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ಭಾರತಕ್ಕೆ ನೀಡಿದ್ದಾರೆ ಎಂದು ಸಂತಪುರ ಪೊಲೀಸ್ ಠಾಣೆಯ ಪಿಎಸ್‌ಐ ದಿನೇಶ್ ಎಂಟಿ ಹೇಳಿದರು.
ಔರಾದ್ ತಾಲೂಕಿನ ಸಂತಪುರದ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಬಣ) ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಭಾರತದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯ, ರೂಪುರೇಷೆ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಜೀವನ ನಡೆಸಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನೂ ಅರಿತು ಪಾಲಿಸಬೇಕು” ಎಂದು ಹೇಳಿದರು.
ದಸಂಸ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಮಾತನಾಡಿ, “ಸಂವಿಧಾನ ಪ್ರತಿಯೊಬ್ಬ ಮನುಷ್ಯನಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಗೌರವದಿಂದ ಬದುಕುವ ಹಕ್ಕನ್ನು ನೀಡಿದೆ. ಪ್ರತಿಯೊಬ್ಬರೂ ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವ ಮೂಲಕ ದೇಶದ ಏಕತೆ ಹಾಗೂ ಸಮಗ್ರತೆಯನ್ನು ಎತ್ತಿಹಿಡಿಯಬೇಕು” ಎಂದರು.

ಕಾಲೇಜಿನ ಪ್ರಾಂಶುಪಾಲ ನವೀಲಕುಮಾರ ಮಾತನಾಡಿ, “ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ, ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಅದರಲ್ಲೂ ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಪಾಲಿಸಬೇಕು” ಎಂದರು.
ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಗೌತಮ ಮೇತ್ರೆ, ಶಾಲಿನಿ, ಜಯಪ್ರಕಾಶ್, ಎಎಸ್‌ಐ ರವಿಕುಮಾರ್, ಸುಭಾಷ್ ಪೊಲೀಸ್, ಮೀನಾಕ್ಷಿ ಸಾಗರ, ಗುರುನಾಥ ಅಂಕಲಗಿ, ಕಿರಣ ಬಿರಾದಾರ, ವಿಜಯ, ಶಿವು, ಶರಣು, ಸುರೇಶ, ನಾಗನಾಥ, ಮಲ್ಲಿಕಾರ್ಜುನ, ಶಂಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬೀದರ್ | ಸಮಾನತೆ ಸಂದೇಶ ಸಾರಿದ ಕನಕದಾಸರು: ಸಂಸದ ಸಾಗರ ಖಂಡ್ರೆ



