ಔರಾದ್‌ | ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ : ಶಾಸಕ ಪ್ರಭು ಚವ್ಹಾಣ

Date:

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರವಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು.

- Advertisement -

ಔರಾದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕು. ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ ಮುಲಾಜಿಲ್ಲದೆ ಸತ್ಯ-ಸತ್ಯಾಂಶಗಳನ್ನು ಜನರ ಮುಂದಿಡುವ ಮೂಲಕ ಸಮಾಜ ಹಿತ ಕಾಪಾಡಬೇಕು” ಎಂದು ತಿಳಿಸಿದರು.

ಔರಾದ್ ತಾಲೂಕಿನಲ್ಲಿ ಪತ್ರಕರ್ತರಿಗೆ ಅನುಕೂಲವಾಗುವಂತೆ ಪತ್ರಿಕಾ ಭವನ ನಿರ್ಮಾಣದ ಅಗತ್ಯವಿದ್ದು, ನಿವೇಶನ ದೊರೆತರೆ ಅಗತ್ಯ ನೆರವು ಒದಗಿಸಿ ಭವ್ಯ ಕಟ್ಟಡ ನಿರ್ಮಿಸಲು ಸಹಕಾರ ನೀಡುವುದಾಗಿ ಶಾಸಕ ಚವ್ಹಾಣಾ ಅವರು ಭರವಸೆ ನೀಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, “ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಆಡಳಿತ ವ್ಯವಸ್ಥೆಯನ್ನು ಎಚ್ಚರಗೊಳಿಸುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರು ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ಧಿಯಾಗುತ್ತದೆ” ಎಂದರು.

WhatsApp Image 2026 07 29 at 5.43.58 PM
ಔರಾದ್‌ ತಾಲೂಕಿನ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ವಿಶೇಷ ಉಪನ್ಯಾಸ ನೀಡಿ, “ಪತ್ರಕರ್ತರು ಯಾವಾಗಲೂ ನಿಜಾಂಶಗಳನ್ನು ಆಧರಿಸಿದ ಸುದ್ದಿಗಳನ್ನು ಹುಡುಕಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಅರೆಬರೆ ಮಾಹಿತಿ ಅಥವಾ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸದೆ, ಸತ್ಯ ಮತ್ತು ನಿಖರತೆಗೆ ಆದ್ಯತೆ ನೀಡಬೇಕು. ವೈಯಕ್ತಿಕ ಸುದ್ದಿಗಳಿಗಿಂತ ಸಾರ್ವಜನಿಕ ಹಿತಾಸಕ್ತಿ, ಜನರ ಸಮಸ್ಯೆಗಳು ಹಾಗೂ ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬೆಳಕಿಗೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ” ಎಂದರು.

“ಅಧಿಕಾರಿಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ತಪ್ಪು ಮಾಡಿದ ಸಂದರ್ಭದಲ್ಲಿ ಅದನ್ನು ಜವಾಬ್ದಾರಿಯುತವಾಗಿ ಬಹಿರಂಗಪಡಿಸಿ, ಅವರನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಪತ್ರಕರ್ತರು ಮಾಡಬೇಕು. ಅದೇ ವೇಳೆ ಜನರ ನಂಬಿಕೆ, ವಿಶ್ವಾಸ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಪತ್ರಕರ್ತರು ಜನರ ಧ್ವನಿಯಾಗಿ, ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಸಮಾಜದಲ್ಲಿ ಅವರಿಗೆ ಹೆಚ್ಚಿನ ಗೌರವ ಮತ್ತು ವಿಶ್ವಾಸ ದೊರೆಯುತ್ತದೆ” ಎಂದು ಸಲಹೆ ನೀಡಿದರು.

ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಮಾತನಾಡಿ, “ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿತ್ತು. ಇಂದಿನ ಮಾಧ್ಯಮ ಕ್ಷೇತ್ರವು ವ್ಯಾಪಕವಾಗಿ ಬೆಳೆದಿದ್ದು, ವೃತ್ತಿಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಮತ್ತು ವಸ್ತುನಿಷ್ಠತೆ ಅತ್ಯಗತ್ಯವಾಗಿದೆ. ಊಹಾಪೋಹಗಳಿಗೆ ಅವಕಾಶ ನೀಡದೆ ಸತ್ಯಾಧಾರಿತ ಸುದ್ದಿಗಳಿಗೆ ಆದ್ಯತೆ ನೀಡಬೇಕು. ಅನ್ಯ ಭಾಷೆಗಳ ಪ್ರಭಾವ ಇರುವ ಗಡಿಭಾಗದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿಯೂ ಪತ್ರಕರ್ತರ ಮೇಲಿದೆ” ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, “ಗ್ರಾಮೀಣ ಭಾಗದ ಪತ್ರಕರ್ತರು ಅನೇಕ ಸವಾಲುಗಳ ನಡುವೆಯೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರ ಹಿತಾಸಕ್ತಿ ರಕ್ಷಣೆಗೆ ಸಂಘವು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಪತ್ರಕರ್ತರಿಗಾಗಿ ವಿಶೇಷ ಕಾರ್ಯಾಗಾರಗಳನ್ನು ಆಯೋಜಿಸುವ ಯೋಜನೆಯಿದೆ” ಎಂದು ತಿಳಿಸಿದರು.

WhatsApp Image 2026 07 29 at 5.31.47 PM
ಕಲಬುರಗಿಯ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ಕನ್ನಡ ಜಂಗಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ” ಕನಿಷ್ಠ ಗೌರವಧನದಲ್ಲಿಯೇ ತಾಲೂಕು ಮಟ್ಟದ ಪತ್ರಕರ್ತರು ಸಮಾಜದ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

‘ಕನ್ನಡ ಜಂಗಮ’ ಪ್ರಶಸ್ತಿ ಪ್ರದಾನ :

ಕಲಬುರಗಿ ವಿಭಾಗದ ಸ್ಥಳೀಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ಮೂರು ದಶಕಗಳಿಗೂ ಅಧಿಕ ಅವಧಿಯ ಪತ್ರಿಕಾ ಸೇವೆಯನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಸ್ಮರಣಾರ್ಥ ರಾಜ್ಯ ಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ನೀಡಿ ಗೌರವಿಸಿತು.

ಇದನ್ನೂ ಓದಿ : ಔರಾದ್‌ | ʼನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯಿತಿ ಇಒ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂಘದ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಸೇರಿದಂತೆ ಶರಣಪ್ಪ ಚಿಟ್ಮೆ, ಚನ್ನಬಸವ ಮೊಕ್ತೆದಾರ್, ರತಿಕಾಂತ ಮಜಗೆ, ರವೀಂದ್ರ ಮೊಕ್ತೆದಾರ್, ಅಂಬ್ರೇಶ ಚಿದ್ರೆ, ಬಾಲಾಜಿ ಕುಂಬಾರ, ಅಹ್ಮದ್ ಜಂಬಗಿ, ಅಮರ ಸ್ವಾಮಿ, ಶಿವಕುಮಾರ ಸಾದುರೆ, ರಾಚಯ್ಯ ಸ್ವಾಮಿ, ರವಿಕುಮಾರ ಶಿಂಧೆ, ಲಕ್ಷ್ಮಣ ರಾಠೋಡ, ರಾಜಕುಮಾರ ಚಾಂಬೋಳೆ, ಪ್ರಭು ಸ್ವಾಮಿ, ಅಂಬಾದಾಸ ನಳಗೆ, ಶಿವಾನಂದ ಬೇಂದ್ರೆ, ವಿನೋದ ಚಿದ್ರೆ, ಅರವಿಂದ ಮಲ್ಲಿಗೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಪತ್ರಕರ್ತರಾದ ಮಲ್ಲಪ್ಪ ಗೌಡಾ ಸ್ವಾಗತಿಸಿದರು. ರಿಯಾಜಪಾಶಾ ಕೊಳ್ಳೂರು ಕಾರ್ಯಕ್ರಮ ನಿರೂಪಿಸಿ, ಮನ್ಮಥ ಸ್ವಾಮಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...

ಸೌಜನ್ಯ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಎಸ್‌ಐಟಿ ನೋಟಿಸ್ ಸಾಧ್ಯತೆ

ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ...

ಪಂಜಾಬ್‌ | ನ.4ರಂದು ಸಂಗ್‌ರೂರ್‌ನಲ್ಲಿ ʼಇನ್ಸಾಫ್ ರ‍್ಯಾಲಿʼ; ರಾಹುಲ್ ಗಾಂಧಿ ಭಾಗಿ

ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ...

ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ...