ಔರಾದ್ ತಾಲೂಕಿನ ಶೆಂಬೆಳ್ಳಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮ ಪಂಚಾಯತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು.
ಬಳಿಕ ಮಾತನಾಡಿ, “ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಡಿದ್ದಾರೆ. ಅವರ ಹೋರಾಟ ಫಲದಿಂದ ನಾವು ಬ್ರಿಟಿಷರಿಂದ ಮುಕ್ತವಾಗಿ ಸ್ವತಂತ್ರರಾಗಿದ್ದೇವೆ. ಭಾರತ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನದಗೈದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು” ಎಂದರು.
ಇದೇ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಯಂತಿಯನ್ನು ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣ ಅವರ ಶೌರ್ಯ, ದೇಶಭಕ್ತಿ ಹಾಗೂ ತ್ಯಾಗವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಳಿಕ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿ ಗ್ರಾಮಗಳಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಆರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದನ್ನೂ ಓದಿ : ವಿ.ಕೃ. ಗೋಕಾಕ್ ಅವರ ಕತೆ | ಸಾವಿನ ಮೇಜವಾನಿ
ಕಾರ್ಯಕ್ರಮದಲ್ಲಿ ಮಾಜಿ ತಾ.ಪಂ. ಸದಸ್ಯ ನಾಗಶೆಟ್ಟಿ ಗಾದಗೆ, ಮುಖಂಡರಾದ ಗಣಪತಿ ವಾಸುದೇವ ಸೇರಿದಂತೆ ಗ್ರಾಮಸ್ಥರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಗ್ರಂಥಪಾಲಕರು ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.





