ಔರಾದ್‌ | 3 ವರ್ಷ ಕಳೆದರೂ ಆರಂಭವಾಗದ ಕೆರೆ ತುಂಬಿಸುವ ಯೋಜನೆ ಕಾಮಗಾರಿ

Date:

ಔರಾದ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ಮಂಜೂರಾಗಿರುವ ₹560.70ಕೋಟಿ ಮೊತ್ತದ 36 ಕೆರೆ ತುಂಬಿಸುವ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

- Advertisement -

ಆ.19ರಂದು ಶಾಸಕ ಪ್ರಭು ಚವ್ಹಾಣ ಅವರು ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಜಲ ಸಂಪನ್ಮೂಲ ಇಲಾಖೆ ಸಚಿವ ಎನ್.ಚಲುವರಾಯ ಸ್ವಾಮಿ ಅವರು ಲಿಖಿತ ರೂಪದಲ್ಲಿ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಾಹಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಚವ್ಹಾಣ ಅವರು, “ಔರಾದ(ಬಿ) ಕ್ಷೇತ್ರದಲ್ಲಿರುವ ನೀರಿನ ಸಮಸ್ಯೆಯನ್ನು ಶಾಶ್ವತ ಪರಿಹಾರ ಕಲ್ಪಿಸಬೇಕು. ಕೃಷಿಗೆ ನೀರಿನ ಲಭ್ಯತೆ ಕಲ್ಪಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು. ಅಂತರ್ಜಲ ಮಟ್ಟ ಹೆಚ್ಚಿಸುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಲಭ್ಯತೆಯನ್ನು ಸುಧಾರಿಸಬೇಕೆಂಬ ಉದ್ದೇಶದಿಂದ 2023ರಲ್ಲಿ ₹560.70 ಕೋಟಿ ಯೋಜನೆಯನ್ನು ಮಂಜೂರು ಮಾಡಿಸಿದ್ದೇನೆ. ಆದರೆ ಯೋಜನೆ ಮಂಜೂರಾಗಿ ಮೂರು ವರ್ಷ ಕಳೆದರೂ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗದೆ ಮಂದಗತಿಯಲ್ಲಿ ನಡೆಯುತ್ತಿರುವುದು ಬೇಸರ ತರಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯೋಜನೆಯ ಕಾಮಗಾರಿಗಳು ವಿಳಂಬವಾಗುತ್ತಿರುವುದರಿಂದ ರೈತರು ಹಾಗೂ ಕ್ಷೇತ್ರದ ಜನರು ನಿರೀಕ್ಷಿತ ಪ್ರಯೋಜನದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಕಾಮಗಾರಿಗೆ ವೇಗ ನೀಡಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿಗೆ ಅವಕಾಶ ಮಾಡಿಕೊಡಬಾರದು. ರೈತರ ಹಿತದೃಷ್ಟಿಯಿಂದ ಮಂಜೂರಾದ ಈ ಮಹತ್ವದ ಯೋಜನೆ ಶೀಘ್ರ ಪೂರ್ಣಗೊಂಡು, ಔರಾದ ಕ್ಷೇತ್ರದ ರೈತರಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಕಾಮಗಾರಿ ವಿಳಂಬವೇಕೆ?

ಈ ಯೋಜನೆಯನ್ನು ಎರಡು ಹಂತದಲ್ಲಿ ಪೂರ್ಣಗೊಳಿಸುವ ಯೋಜನೆಯಿದ್ದು, ಮೊದಲ ಹಂತದಲ್ಲಿ ₹300ಕೋಟಿ, ಎರಡನೇ ಹಂತದಲ್ಲಿ ₹260.70 ಕೋಟಿ ಮೊತ್ತದಲ್ಲಿ ಕಾಮಗಾರಿ ನಡೆಯಲಿದೆ. 2023ರ ಮಾರ್ಚ್‌ನಲ್ಲಿ ಮೊದಲ ಹಂತದ ಕಾಮಗಾರಿಗೆ ಟೆಂಡರ್‌ ಕರೆದು ಅನುಮೋದನೆ ನೀಡಲಾಗಿತ್ತು. ನಂತರ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಳಂಬವಾಗಿದ್ದು, ಅದಾನಂತರ ಕಟ್ಟಡ ಸಾಮಾಗ್ರಿಗಳ ದರ ಹೆಚ್ಚಳ ಹಿನ್ನೆಲೆ ಗುತ್ತಿಗೆದಾರರು ಕಾಮಗಾರಿ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸರ್ಕಾರ ಉತ್ತರಿಸಿದೆ.

ಇದನ್ನೂ ಓದಿ : ಬೀದರ್ ನಗರದ ವಿವಿಧ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಸದರಿ ಕಾಮಗಾರಿಯನ್ನು ಮರು ಟೆಂಡರ್‌ ಕರೆದು, 2025ರ ಜುಲೈನಲ್ಲಿ ಕರಾರು ಒಪ್ಪಂದ ಮಾಡಿಕೊಳ್ಳಾಗಿದೆ.ಗುತ್ತಿಗೆದಾರರ ಕರಾರಿನ ಅನ್ವಯ 2028ರ ಜನವರಿ ತಿಂಗಳಲ್ಲಿ ಪೂರ್ಣಗೊಳಿಸಬೇಕಾಗಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಸರ್ಕಾರ ಲಿಖಿತ ಉತ್ತರ ಒದಗಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...