ಔರಾದ್‌ | ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ತಾಪಂ ಇಒ ಕಿರಣ ಪಾಟೀಲ್ ಭೇಟಿ

Date:

ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಹಾರಾಜವಾಡಿ, ವಿಜಯನಗರ ತಾಂಡಾ ಹಾಗೂ ಪೋಮಾ ದೇವಲಾ ತಾಂಡಾಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಜಲಮೂಲ ಬತ್ತಿರುವುದರಿಂದ ನೀರಿನ ಸಮಸ್ಯೆ ಉಲ್ಬಣಿಸಿರುವ ಗ್ರಾಮಗಳಿಗೆ ಭೇಟಿ ನೀಡಿ ಜನರಿಂದ ಮಾಹಿತಿ ಪಡೆದ ಅವರು ನೀರಿನ ಅಭಾವ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಮಹಾರಾಜವಾಡಿ ಗ್ರಾಮದಲ್ಲಿ ಕುಡಿಯುವ ನೀರಿನ ಬೋರ್‌ವೆಲ್‌ನಲ್ಲಿ ನೀರಿನ ಮಟ್ಟ ಕುಸಿದಿದ್ದು ಅದಕ್ಕೆ ರೀ ಬೋರ್ ಮಾಡಿ ಸಮಸ್ಯೆ ಪರಿಹರಿಸಲಾಗುವುದು. ಜಂಬಗಿ ಪಂಚಾಯತ್‌ ವ್ಯಾಪ್ತಿಯ ಕೆಲ ತಾಂಡಾಗಳಲ್ಲಿ ಉಂಟಾದ ನೀರಿನ ಸಮಸ್ಯೆಗೆ ಈಗಾಗಲೇ ಟ್ಯಾಂಕರ್ ಮುಖಾಂತರ ನೀರು ಪೂರೈಸಲಾಗುತ್ತಿದೆ. ಯಾವುದೇ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗದಂತೆ ತಾಲೂಕಾಡಳಿತ ನೋಡಿಕೊಳ್ಳುತ್ತದೆʼ ಎಂದರು.

ಇದನ್ನೂ ಓದಿ : ಔರಾದ್‌ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು

ಜಂಬಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ ರೆಡ್ಡಿ, ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಪಂಚಾಯತ್ ಸಿಬ್ಬಂದಿ, ಗ್ರಾಮಸ್ಥರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...