ಬೀದರ್ | ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕ ಸಾವು : 2 ದಿನಗಳ ನಂತರ ಶವ ಪತ್ತೆ

Date:

ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ.

- Advertisement -

ಬಳತ (ಬಿ) ಗ್ರಾಮದ ಯುವರಾಜ ಅನೀಲ ಚಿದ್ರೆ (28) ಮೃತ ಯುವಕ. ಶನಿವಾರ ಬೆಳಗ್ಗೆ 9ಗಂಟೆ ಸುಮಾರಿಗೆ ಮೂವರು ಸ್ನೇಹಿತರೊಂದಿಗೆ ಈಜಲು ತೆರಳಿದ ವೇಳೆ ಈಜು ಬಾರದೆ ಮುಳುಗಿ ನಾಪತ್ತೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ, ಈಜು ತಜ್ಞರು ಹಾಗೂ ಗ್ರಾಮಸ್ಥರ ತಂಡ ಬೋಟ್ ಮುಖಾಂತರ ಕಾರ್ಯಚರಣೆ ಕೈಕೊಂಡಿದ್ದಾರೆ. ಯುವಕನ ಸುಳಿವು ಸಿಗದ ಹಿನ್ನೆಲೆ ಕಲಬುರಗಿಯ ಎಸ್‌ಡಿಆರ್‌ಎಫ್ ಆಗಮಿಸಿ ಭಾನುವಾರ ಇಡೀ ದಿನ ಶೋಧಕಾರ್ಯ ನಡೆಸಿದರೂ ಪತ್ತೆಯಾಗಲಿಲ್ಲ.

ಎರಡು ದಿನ ಕಳೆದರೂ ನದಿಯಲ್ಲಿ ಮುಳುಗಿದ ಯುವಕನ ಪತ್ತೆಯಾಗದ ಹಿನ್ನೆಲೆ ಯುವಕನ ಕುಟುಂಬಸ್ಥರು, ಸಂಘಟನೆಗಳ ಮುಖಂಡರು ಗ್ರಾಮದ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ರಾತ್ರಿ ದಿಢೀರನೆ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ಪೊಲೀಸ್ ಮೇಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಯುವಕನ ಪತ್ತೆಗಾಗಿ ಶೋಧ ಕಾರ್ಯ ತಜ್ಞರನ್ನು ಕರೆಯಿಸಿ ಶೋಧ ಮುಂದುವರಿಸಲಾಗುವುದು ಎಂದು ಹೇಳಿದರು.

ಸೋಮವಾರ ಬೆಳಗ್ಗೆ ಮಾಂಜ್ರಾ ನದಿ ನೀರಿನಲ್ಲಿ ತಂತಾನೇ ಯುವಕನ ಶವ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ತಂದೆ-ತಾಯಿಗೆ ಏಕೈಕ ಪುತ್ರನಾಗಿದ್ದ ಯುವರಾಜ ಬಿಕಾಂ ಪದವಿ ಪೂರೈಸಿ ವರ್ಕ್‌ ಫ್ರಮ್‌ ಹೋಮ್‌ ಮಾಡುತ್ತಿದ್ದನು. ಮನೆಗೆ ಆಸರೆಯಾಗಿದ್ದ ಪುತ್ರನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಎರಡು ದಿನಗಳಿಂದ ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.

ಇದನ್ನೂ ಓದಿ : ಬೀದರ್‌ | ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಸಾರ್ವಜನಿಕ ಗ್ರಂಥಾಲಯಗಳು!

ಠಾಣಾ ಕುಶನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...