ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

Date:

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಔರಾದ್‌ ತಾಲ್ಲೂಕು ನಾಗರಿಕ ಸಂಘರ್ಷ ಸಮಿತಿ ವತಿಯಿಂದ ಮಂಗಳವಾರ ಕರೆ ನೀಡಿದ ಔರಾದ್‌ ಬಂದ್‌ ಸಂಪೂರ್ಣ ಯಶಸ್ವಿಯಾಯಿತು.

- Advertisement -

ಬೆಳಗ್ಗೆಯಿಂದಲೇ ಪಟ್ಟಣದ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯ ಬಸ್‌ ಸಂಚಾರವೂ ಸ್ಥಗಿತಗೊಂಡಿತ್ತು. ದ್ವಿಚಕ್ರ ವಾಹನಗಳ ಸಂಚಾರ ಹೊರತುಪಡಿಸಿ ಇತರೆ ವಾಹನಗಳ ಓಡಾಟ ವಿರಳವಾಗಿತ್ತು. ಪರಿಣಾಮ ಪಟ್ಟಣದ ಜನಜೀವನ ಬಹುತೇಕ ಸ್ಥಗಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವಿಧ ವಾರ್ಡ್‌ಗಳ ಮಹಿಳೆಯರು, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಿತು. ಈ ವೇಳೆ ‘ಸೋನಾ ನಹೀ, ಚಾಂದಿ ನಹೀ, ಪಾನಿ ದೋ’, ‘ನಮಗೆ ಅನ್ನ ಕೊಡಬೇಡಿ, ಕುಡಿಯಲು ನೀರು ಕೊಡಿ’, ‘ಶಾಶ್ವತ ನೀರಿನ ಪರಿಹಾರ ಬೇಕೇ ಬೇಕು’ ಎಂಬ ಘೋಷಣೆಗಳು ಮೊಳಗಿದವು.

ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡು, ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ಸಮರ್ಪಕ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿ, ಪಟ್ಟಣದ ಜನರಿಗೆ ನಿರಂತರವಾಗಿ ಕುಡಿಯುವ ನೀರು ದೊರೆಯುವಂತೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಅಧಿಕಾರಿಗಳ ವಿರುದ್ಧ ತನಿಖೆಗೆ ಆಗ್ರಹ

ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದರ ಜತೆಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಮತ್ತು ಕರ್ತವ್ಯಲೋಪದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸಮಿತಿ ಆಗ್ರಹಿಸಿದೆ.

WhatsApp Image 2026 11 17 at 6.40.08 PM 1
ಮಾಜಿ ಶಾಸಕ ಗುಂಡಪ್ಪ ಬಿರಾದರ್‌ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು.

ತಾಲ್ಲೂಕಿನ ತೇಗಂಪೂರ ಕೆರೆಗೆ 50 ಎಚ್‌ಪಿ ಸಾಮರ್ಥ್ಯದ ಎರಡು ಮೋಟಾರ್‌ಗಳನ್ನು ಅಳವಡಿಸಬೇಕು. ಅಕ್ರಮವಾಗಿ ಅಳವಡಿಸಿರುವ ಮೋಟಾರ್‌ಗಳನ್ನು ತೆರವುಗೊಳಿಸಬೇಕು. ಈ ಹಿಂದೆ 30 ಎಚ್‌ಪಿ ಮೋಟಾರ್ ಅಳವಡಿಸಲು ಶಿಫಾರಸು ಮಾಡಿದವರು ಯಾರು? ಅದಕ್ಕಾಗಿ ಖರ್ಚು ಮಾಡಿದ ಸರ್ಕಾರಿ ಹಣವೆಷ್ಟು ಎಂಬುದನ್ನು ಬಹಿರಂಗಪಡಿಸಬೇಕು. ಈ ಸಂಬಂಧ ಅವ್ಯವಹಾರ ನಡೆದಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೊಳವೆಬಾವಿ ಮತ್ತು ಬಾವಿಗಳನ್ನು ದುರಸ್ತಿಗೊಳಿಸಬೇಕು. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ನೌಕರರನ್ನು ವರ್ಗಾವಣೆ ಮಾಡಬೇಕು. ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಸ್ಥಳೀಯ ಶಾಸಕರು ನೀಡಿದ ನಿರ್ದೇಶನಗಳನ್ನು ಪಾಲಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತೇಗಂಪೂರ ಕೆರೆಯಲ್ಲಿ ಅಳವಡಿಸಲಾಗಿದ್ದ ಶುದ್ಧೀಕರಣ ಘಟಕ ಕಾಣೆಯಾಗಿರುವ ಕುರಿತು ತನಿಖೆ ನಡೆಸಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು. ಕಾರಂಜಾ ಜಲಾಶಯದಿಂದ ಔರಾದ್‌ ಪಟ್ಟಣಕ್ಕೆ ನೀರು ಪೂರೈಸುವ ಅಮೃತ ಯೋಜನೆಯ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಟ್ಯಾಂಕರ್‌ ಮೂಲಕ ನೀರು ಪೂರೈಸುವ ವ್ಯವಸ್ಥೆಯಲ್ಲಿ ಅಕ್ರಮ ನಡೆಯುತ್ತಿವೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸಬೇಕು. ಟ್ಯಾಂಕರ್‌ಗಳ ಸಂಖ್ಯೆಯನ್ನು ಹೆಚ್ಚಾಗಿ ದಾಖಲಿಸಿ ತಹಶೀಲ್ದಾರ್‌ಗೆ ತಪ್ಪು ಮಾಹಿತಿ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೀದರ್‌ ಸಹಾಯಕ ಆಯುಕ್ತ ಅಭಿನವ್‌ ಜೈನ್‌, ತಹಶೀಲ್ದಾರ್‌ ಮಹೇಶ ಪಾಟೀಲ್‌ ಹಾಗೂ ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತ ಅಭಿನವ್‌ ಜೈನ್‌ ಅವರಿಗೆ ಸಲ್ಲಿಸಿದರು.

IMG 20261117 WA0016
ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳು ಬಾಗಿಲು ತೆರೆಯಲಿಲ್ಲ

ಸಹಾಯಕ ಆಯುಕ್ತ ಅಭಿನವ್‌ ಜೈನ್‌ ಮಾತನಾಡಿ, “ಔರಾದ್‌ ಪಟ್ಟಣದಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ತಾವು ಔರಾದ್‌ನಲ್ಲಿಯೇ ವಾಸ್ತವ್ಯ ಹೂಡಿ, ಅಧಿಕಾರಿಗಳ ತಂಡದೊಂದಿಗೆ ಪಟ್ಟಣದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತೇನೆ. ತೇಗಂಪೂರ ಕೆರೆಯಲ್ಲಿ 50 ಎಚ್‌ಪಿ ಸಾಮರ್ಥ್ಯದ ಮೋಟಾರ್ ಅಳವಡಿಕೆ ಸೇರಿದಂತೆ ಪಟ್ಟಣದಲ್ಲಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು” ಎಂದು ಭರವಸೆ ನೀಡಿದರು.

ಶೀಘ್ರ ನೀರು ಪೂರೈಕೆಯ ಲಿಖಿತ ಭರವಸೆ

ಔರಾದ್ ಬಂದ್‌ ಬಳಿಕ ನಾಗರಿಕ ಸಂಘರ್ಷ ಸಮಿತಿ ಸಲ್ಲಿಸಿದ ಮನವಿ ಸ್ವೀಕರಿಸಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ನೀರಿನ ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳಲಿರುವ ಕ್ರಮಗಳ ಕುರಿತು ಸಮಿತಿಗೆ ಲಿಖಿತ ಹಿಂಬರಹ ನೀಡಿದ್ದಾರೆ.

ಪಟ್ಟಣದ 7 ವಾರ್ಡ್‌ಗಳಿಗೆ ಈಗಾಗಲೇ ತೇಗಂಪೂರ ಕೆರೆಯಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ. ಉಳಿದ ವಾರ್ಡ್‌ಗಳಿಗೂ ನೀರು ಪೂರೈಸಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಹೊಸ ಮೋಟಾರ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಪಟ್ಟಣದ ಎಲ್ಲ ವಾರ್ಡ್‌ಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಂಕರ್‌ಗಳ ಸಂಖ್ಯೆಯನ್ನು ಹೆಚ್ಚಿಸಿ ಎಲ್ಲ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲಿಖಿತವಾಗಿ ಭರವಸೆ ನೀಡಿದ್ದಾರೆ.

WhatsApp Image 2026 11 17 at 6.40.09 PM

ಬೇಡಿಕೆ ಈಡೇರದಿದ್ದರೆ ಧರಣಿ

ಕುಡಿಯುವ ನೀರು ಒದಗಿಸುವುದು ಸರ್ಕಾರ ಹಾಗೂ ಸ್ಥಳೀಯ ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ. ಜನರು ನೀರಿಗಾಗಿ ಪರದಾಡುತ್ತಿರುವ ವೇಳೆ ಕೇವಲ ಕಾಗದದ ಮೇಲಿನ ಲೆಕ್ಕಾಚಾರಗಳಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವಾಸ್ತವ ಸ್ಥಿತಿಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

ಮಂಗಳವಾರದ ಔರಾದ್‌ ಬಂದ್‌ ಮೂಲಕ ಹೋರಾಟ ಆರಂಭಿಸಲಾಗಿದೆ. ಬೇಡಿಕೆಗಳು ಈಡೇರದಿದ್ದರೆ ಮಿನಿ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಸಮಿತಿ ಎಚ್ಚರಿಕೆ ನೀಡಿದೆ.

WhatsApp Image 2026 11 17 at 7.05.29 PM

ಪೊಲೀಸ್‌ ಬಿಗಿ ಬಂದೋಬಸ್ತ್‌

ಬಂದ್‌ ಹಿನ್ನೆಲೆಯಲ್ಲಿ ಸಿಪಿಐ ರಘುವೀರ್‌ ಸಿಂಗ್‌ ಠಾಕೂರ್‌ ನೇತೃತ್ವದಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದೆ ಬಂದ್‌ ಶಾಂತಿಯುತವಾಗಿ ಮುಕ್ತಾಯಗೊಂಡಿತು.

ಇದನ್ನೂ ಓದಿ : ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗುಂಡಪ್ಪ ಬಿರಾದರ್‌, ನಾಗರಿಕ ಸಂಘರ್ಷ ಸಮಿತಿ ಅಧ್ಯಕ್ಷ ಡಾ. ಧನರಾಜ ರಾಗಾ, ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ, ಸಮಿತಿಯ ಪ್ರಮುಖರಾದ ಬಸವರಾಜ ಶೆಟಕಾರ, ಕಲ್ಲಪ್ಪ ದೇಶಮುಖ, ರಾಹುಲ್ ಖಂದಾರೆ, ಗುರುನಾಥ ವಡ್ಡೆ, ಅನೀಲ ಜೀರೊಬೆ, ಅನೀಲಕುಮಾರ ನಿರ್ಮಳೆ, ರತ್ನದೀಪ್ ಕಸ್ತೂರೆ, ಸುನೀಲ ಮಿತ್ರಾ, ಆದಿತ್ಯ ಕೇದಾರೆ, ಅನೀಲ ದೇವಕತ್ತೆ, ರಾಜಕುಮಾರ ಎಡವೆ, ಆನಂದ ದ್ಯಾಡೆ, ರಹೀಂಸಾಬ್ ಮೌಲಿಸಾಬ್, ರಾಜಕುಮಾರ ಚಿದ್ರೆ, ಪ್ರವೀಣ ಕಾರಂಜೆ, ನಾಗನಾಥ ವಾಕೋಡೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

WhatsApp Image 2026 11 17 at 7.09.03 PM
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಜೀವನಶೈಲಿ ಬದಲಾವಣೆಯಿಂದ ಮಧುಮೇಹ ಹೆಚ್ಚಳ;ಡಾ. ತೇಜಶ್ವಿನಿ ವಲ್ಲಭ

ಬದಲಾಗುತ್ತಿರುವ ಜೀವನಶೈಲಿಯಿಂದ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕಾಯಿಲೆ ಬಂದ ನಂತರ...

ಸರ್ಕಾರಿ ಉದ್ಯೋಗ ಪರೀಕ್ಷೆಗೆ ಇನ್ನು ಶುಲ್ಕವಿಲ್ಲ: ಬಂಗಾಳ ಸಿಎಂ ಸುವೇಂದು ಅಧಿಕಾರಿ ಘೋಷಣೆ!

ಪಶ್ಚಿಮ ಬಂಗಾಳದ ಯುವಜನತೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ...

ಆಯೋಗವು ಧರ್ಮ/ಜಾತಿ ದತ್ತಾಂಶ ನಿರ್ವಹಿಸುವುದಿಲ್ಲ; ಯೋಗಿಯ ‘ಹಿಂದು ಮತಗಳ ಡಿಲೀಟ್’ ಆರೋಪಕ್ಕೆ ಚುನಾವಣಾಧಿಕಾರಿ ಪ್ರತಿಕ್ರಿಯೆ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ 1.27 ಕೋಟಿ ಹಿಂದು...

‘ನನಗೆ ಮತ್ತೆ ಭಯ ಶುರುವಾಗಿದೆ’: ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೊ ಆಘಾತ

ಇಬ್ಬರು ಅತ್ಯಾಚಾರಿಗಳ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿರುವ ಬೆಳವಣಿಗೆಯಿಂದ ತನಗೆ...